ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಪ್ರೀಂ ಕೋರ್ಟ್‌ನ ಮುಂದಿನ ಸಿಜೆಐ (CJI) ಆಗಿ ಅಧಿಕಾರ ವಹಿಸಿಕೊಳ್ಳಲು ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಹೆಸರನ್ನು ಹಾಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ಶಿಫಾರಸು ಮಾಡಿದ್ದಾರೆ.
ಮುಂದಿನ ನವೆಂಬರ್ 11ರಂದು ಸಿಜೆಐ ಹುದ್ದೆಯಿಂದ ಚಂದ್ರಚೂಡ್ ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಮೆಮೊರಾಂಡಮ್ ಆಫ್ ಪ್ರೊಸೀಜರ್ ಪ್ರಕಾರ, ಮುಂದಿನ ಶಿಫಾರಸು ಕಳುಹಿಸುವಂತೆ ಕೇಂದ್ರ ಸರ್ಕಾರ ಕಳೆದ ಶುಕ್ರವಾರ ಚಂದ್ರಚೂಡ್ ಅವರಿಗೆ ಪತ್ರ ಬರೆದಿತ್ತು. ಇದಕ್ಕೆ ಪ್ರತಿಕ್ರಿಯಿಸಿ ಪತ್ರ ಬರೆದಿರುವ ಚಂದ್ರಚೂಡ್ ಅವರು ತಮ್ಮ ಉತ್ತರಾಧಿಕಾರಿಯಾಗಿ ಸಂಜೀವ್ ಖನ್ನಾ ಅವರ ಹೆಸರನ್ನ ಶಿಫಾರಸು ಮಾಡಿದ್ದಾರೆ.
ಸರ್ಕಾರದ ಅನುಮೋದನೆ ನಂತರ ನ್ಯಾ. ಸಂಜೀವ್ ಖನ್ನಾ 51ನೇ ಸಿಜೆಐಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
2022ರ ನವೆಂಬರ್ 8ರಂದು ಸಿಜೆಐ ಉದಯ್ ಉಮೇಶ್ ಲಲಿತ್ (UU Lalit) ಅವರು ನಿವೃತ್ತಿ ಹೊಂದಿದ ಬಳಿಕ ಚಂದ್ರಚೂಡ್ ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಅವರು ಅಧಿಕಾರ ಸ್ವೀಕರಿಸಿದ್ದರು. ಯುಯು ಲಲಿತ್ ಅವರಿಗೂ ಮುನ್ನ ಎನ್.ವಿ.ರಮಣ ಅವರು 48ನೇ ಸಿಜೆಐ ಆಗಿ ಅಧಿಕಾರ ನಿರ್ವಹಿಸಿದ್ದರು.