ಬಿಷ್ಣೋಯಿ ಗ್ಯಾಂಗ್ ವಿರುದ್ಧ ಕ್ರಮ ಕೈಗೊಳ್ಳದ ಕೆನಡಾದಿಂದ ಭಾರತದ ವಿರುದ್ದ ಆರೋಪ ನಿಜವಾಗಿಯೂ ವಿಚಿತ್ರ: MEA 

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಖಲಿಸ್ತಾನಿ ಹೋರಾಟಗಾರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ವಿಚಾರವಾಗಿ ಭಾರತದ ವಿರುದ್ಧದ ಇಲ್ಲ ಸಲ್ಲದ ಆರೋಪ ಮಾಡುತ್ತಿರುವ  ಕೆನಡಾ ಸರಕಾರ ವಿರುದ್ಧ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಆಕ್ರೋಶ ವ್ಯಕ್ತಪಡಿಸಿದ್ದು, ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಸದಸ್ಯರನ್ನು ಬಂಧಿಸುವಂತೆ ಭಾರತ ಮಾಡಿದ ಮನವಿ ಕುರಿತು ಕ್ರಮ ಕೈಗೊಳ್ಳುವಲ್ಲಿ ಕೆನಡಾ ವಿಫಲವಾಗಿದೆ ಎಂದು ಗುರುವಾರ ಹೇಳಿದೆ.

ಹಲವು ಮನವಿಗಳ ಹೊರತಾಗಿ ಕೆನಡಾ ಗ್ಯಾಂಗ್‌ನ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಭಾರತದ ಪ್ರಮುಖ ಕಾಳಜಿಯನ್ನು ಬಗೆಹರಿಸಲಿಲ್ಲ. ಇದರ ಹಿಂದೆ ರಾಜಕೀಯ ಉದ್ದೇಶ ಅಡಗಿದೆ ಎಂದು MEA ವಕ್ತಾರ ರಣಧೀರ್ ಜೈಸ್ವಾಲ್ ತಿರುಗೇಟು ನೀಡಿದ್ದಾರೆ.

ಕೆನಡಾದೊಂದಿಗೆ ಕಳೆದ ದಶಕದಲ್ಲಿ 26 ಹಸ್ತಾಂತರದ ಮನವಿಗಳಿಗೆ ಯಾವುದೇ ಸ್ಪಂದನೆ ದೊರೆತಿಲ್ಲ. ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಸದಸ್ಯರ ಬಗ್ಗೆ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ಕೆನಡಾ ಸರ್ಕಾರದೊಂದಿಗೆ ಹಂಚಿಕೊಂಡಿದ್ದು, ಅವರ ಬಂಧನಕ್ಕೆ ಮನವಿ ಮಾಡಿದ್ದೇವೆ. ಇಲ್ಲಿಯವರೆಗೆ ನಮ್ಮ ಮನವಿಗೆ ಕೆನಡಾ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಗ್ಯಾಂಗ್ ಮಾಡಿರುವ ಅಪರಾಧಗಳಿಗೆ RCMP ( ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್) ಈಗ ಭಾರತವನ್ನು ದೂಷಿಸುತ್ತಿರುವುದು ನಿಜವಾಗಿಯೂ ವಿಚಿತ್ರವಾಗಿದೆ ಎಂದು ಅವರು ಹೇಳಿದ್ದಾರೆ.

2023 ರಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರದ ಏಜೆಂಟರ ಕೈವಾಡವಿದೆ ಎಂದು ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ  ಮಾಡಿರುವ ಆರೋಪಗಳನ್ನು MEA ತಳ್ಳಿಹಾಕಿದೆ.ಬುಧವಾರ ಒಟ್ಟಾವಾದಲ್ಲಿ ವಿದೇಶಿ ಹಸ್ತಕ್ಷೇಪ ಆಯೋಗದಲ್ಲಿ ಸಾಕ್ಷಿಯಾಗಿ ಕಾಣಿಸಿಕೊಂಡ ಟ್ರೂಡೊ, ಕೆನಡಾ ಪ್ರಬಲ ಸಾಕ್ಷ್ಯ ಹೊಂದಿಲ್ಲ. ಗುಪ್ತಚರ ವರದಿ ಆಧರಿಸಿ ಆರೋಪ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ಕೆನಡಾ ಆರೋಪಕ್ಕೆ ತಕ್ಕಂತೆ ಯಾವುದೇ ಸಾಕ್ಷ್ಯ ಒದಗಿಸಿಲ್ಲ. ಭಾರತ ಮತ್ತು ಭಾರತೀಯ ರಾಜತಾಂತ್ರಿಕರ ವಿರುದ್ಧದ ಗಂಭೀರ ಆರೋಪ ಬೆಂಬಲಿಸುವ ಯಾವುದೇ ಪುರಾವೆಗಳನ್ನು ಕೆನಡಾ ಒದಗಿಸಿಲ್ಲ.ಈ ನಡವಳಿಕೆಯಿಂದ ಭಾರತ-ಕೆನಡಾ ಸಂಬಂಧಗಳಿಗೆ ಹಾನಿ ಉಂಟು ಮಾಡಿದ ಜವಾಬ್ದಾರಿಯು ಪ್ರಧಾನಿ ಟ್ರುಡೊ ಅವರ ಮೇಲಿದೆ ಎಂದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!