ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವಾಯುದಾಳಿ: ಹಮಾಸ್‌ ನಾಯಕನ ಹತ್ಯೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಗಾಜಾದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಹಮಾಸ್‌ ನ ರಾಜಕೀಯ ಬ್ಯೂರೋದ ನಾಯಕ ಯಾಹ್ಯಾ ಸಿನ್ವಾರ್ ಕೊಲ್ಲಲ್ಪಟ್ಟಿದ್ದು, ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಇಸ್ರೇಲಿ ಸೇನೆಯು ಹೇಳಿದೆ.

ಗಾಜಾದಲ್ಲಿ ಐಡಿಎಫ್ ಕಾರ್ಯಾಚರಣೆ ವೇಳೆ 3 ಉಗ್ರರು ಹತರಾಗಿದ್ದಾರೆ. ಮೃತ ಭಯೋತ್ಪಾದಕರಲ್ಲಿ ಓರ್ವ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಆಗಿರುವ ಸಾಧ್ಯತೆ ಕುರಿತು ಐಡಿಎಫ್ ತನಿಖೆ ನಡೆಸುತ್ತಿದೆ. ಈ ಹಂತದಲ್ಲಿ ಭಯೋತ್ಪಾದಕರ ಗುರುತನ್ನು ಖಚಿತಪಡಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಇಸ್ರೇಲ್ ರಕ್ಷಣಾ ಪಡೆಗಳು (IDF) ಹೇಳುವಂತೆ ‘ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಪಡೆಗಳು ಅಗತ್ಯ ಮುನ್ನೆಚ್ಚರಿಕೆಗಳೊಂದಿಗೆ ಕಾರ್ಯಾಚರಣೆಯನ್ನು ಮುಂದುವರೆಸುತ್ತಿವೆ. ಇಸ್ರೇಲ್‌ನ ಸೇನೆಯು ಹಮಾಸ್‌ನ ಉನ್ನತ ನಾಯಕ ಯಾಹ್ಯಾ ಸಿನ್ವಾರ್‌ನನ್ನು ಗಾಜಾದಲ್ಲಿ ಮಿಲಿಟರಿ ಕಾರ್ಯಾಚರಣೆಯಲ್ಲಿ ಹತ್ಯೆಯಾಗಿದ್ದಾನೆಯೇ ಎಂದು ತನಿಖೆ ನಡೆಸುತ್ತಿದೆ.

ಗಾಜಾದ ಆರೋಗ್ಯ ಸಚಿವಾಲಯವು ಉತ್ತರ ಗಾಜಾದ ಶಾಲೆಯೊಂದರಲ್ಲಿ ನಡೆಸಲಾಗುತ್ತಿರುವ ಆಶ್ರಯದ ಮೇಲೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಐದು ಮಕ್ಕಳು ಸೇರಿದಂತೆ 15 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಮಾಹಿತಿಯನ್ನು ನೀಡಿದೆ. ಶಾಲೆಯಲ್ಲಿ ನೆರೆದಿದ್ದ ಹಮಾಸ್ ಮತ್ತು ಇಸ್ಲಾಮಿಕ್ ಜಿಹಾದ್ ಉಗ್ರಗಾಮಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಇಸ್ರೇಲಿ ಸೇನೆ ತಿಳಿಸಿದೆ. ಉತ್ತರ ಗಾಜಾದ ನಗರ ನಿರಾಶ್ರಿತರ ಶಿಬಿರವಾದ ಜಬಾಲಿಯಾದಲ್ಲಿರುವ ಅಬು ಹುಸೇನ್ ಶಾಲೆಯ ಮೇಲೆ ಈ ದಾಳಿ ನಡೆದಿತ್ತು. ಅಲ್ಲಿ ಇಸ್ರೇಲ್ ಒಂದು ವಾರಕ್ಕೂ ಹೆಚ್ಚು ಕಾಲ ಪ್ರಮುಖ ವಾಯು ಮತ್ತು ನೆಲದ ಕಾರ್ಯಾಚರಣೆಯನ್ನು ನಡೆಸುತ್ತಿದೆ.

https://x.com/IDF/status/1846897213001056332?ref_src=twsrc%5Etfw%7Ctwcamp%5Etweetembed%7Ctwterm%5E1846897213001056332%7Ctwgr%5Ef39c9ff1f8b42ca0ee4c74d9d3b34c9feccc01e8%7Ctwcon%5Es1_&ref_url=https%3A%2F%2Fwww.kannadaprabha.com%2Fworld%2F2024%2FOct%2F17%2Fisrael-army-says-checking-if-hamas-chief-yahya-sinwar-killed-in-gaza

ಶಾಲೆಯೊಳಗೆ ಎರಡೂ ಉಗ್ರಗಾಮಿ ಗುಂಪುಗಳು ನಡೆಸುತ್ತಿದ್ದ ಕಮಾಂಡ್ ಸೆಂಟರ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ಇಸ್ರೇಲ್ ಸೇನೆ ತಿಳಿಸಿದೆ. ದಾಳಿಯ ಸಮಯದಲ್ಲಿ ಉಪಸ್ಥಿತರಿದ್ದ ಉಗ್ರಗಾಮಿಗಳೆಂದು ವಿವರಿಸಿದ ಹತ್ತಾರು ಜನರ ಹೆಸರನ್ನು ಅದು ಪಟ್ಟಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!