ಚನ್ನಪಟ್ಟಣ ಅಭ್ಯರ್ಥಿ ತೀರ್ಮಾನ ನನಗೇ ಬಿಟ್ಟಿದಾರೆ: ಎಚ್‌ಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೊಂಬೆನಗರಿ ಚನ್ನಪಟ್ಟಣ ಉಪಚುನಾವಣಾ ದಿನಾಂಕ ಪ್ರಕಟಗೊಂಡ ಬೆನ್ನಲ್ಲೇ ರಾಜಕೀಯ ಪ್ರಕ್ರಿಯೆಗಳು ಆರಂಭವಾಗಿದ್ದು, ಸಭೆ, ಚರ್ಚೆಗಳು ನಡೆಯುತ್ತಿವೆ.

ಈ ಬಗ್ಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮಾತನಾಡಿದ್ದು, ಮೀಟಿಂಗ್‌ನಲ್ಲಿ ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಕೂಡ ಚರ್ಚೆ ಮಾಡಲಾಯಿತು. ಆದರೆ, ಅಂತಿಮವಾಗಿ ಚನ್ನಪಟ್ಟಣದ ಬಗ್ಗೆ ಇನ್ನೂ ಏನೂ ತೀರ್ಮಾನ ಆಗಿಲ್ಲ, ಅಲ್ಲೇ ಇದೆ. ನಾನು ಬಿಜೆಪಿಯ ರಾಜ್ಯ ನಾಯಕರ ಜೊತೆ ಚರ್ಚೆ ಮಾಡುತ್ತೇನೆ. ದೆಹಲಿಯಲ್ಲಿ ಕ್ಷೇತ್ರದ ತೀರ್ಮಾನವನ್ನು ನನಗೆ ಬಿಟ್ಟಿದ್ದಾರೆ. ಚನ್ನಪಟ್ಟಣ ನೀವು ಪ್ರತಿನಿಧಿಸುವ ಕ್ಷೇತ್ರ, ತೀರ್ಮಾನ ನಿಮ್ಮದು ಎಂದು ಹೇಳಿದ್ದಾರೆ. ನಮಗೆ ಎನ್‌ಡಿಎ ಸೀಟ್ ಗೆಲ್ಲಬೇಕು ಅನ್ನೋದು ಅಷ್ಟೇ ಇದೆ. ಇದರಲ್ಲಿ ದುಡುಕಲ್ಲ, ರಾಜಕೀಯ ವಾಸ್ತವಾಂಶಗಳ ಬಗ್ಗೆ ಲೆಕ್ಕಾಚಾರ ಮಾಡಿ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.

ಟಿಕೆಟ್​ ಸಂಬಂಧ ಜೆಡಿಎಸ್ ಪಕ್ಷದ ಮುಖಂಡರ ಸಭೆ ಕರೆದಿದ್ದೇನೆ. ಸೋಮವಾರ ಎನ್​ಡಿಎ ಅಭ್ಯರ್ಥಿ ಆಯ್ಕೆ ಮಾಡಲಾಗುವುದು. ಈಗಾಗಲೇ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಪಾತ್ರದ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಶಿಗ್ಗಾಂವಿ, ಸಂಡೂರಲ್ಲಿ ನಮ್ಮ ಪಾತ್ರ ಕಡಿಮೆ ಇರಬಹುದು. ಆದರೆ ಒಂದೊಂದು ವೋಟು ಕೂಡ ಮುಖ್ಯವಾಗುತ್ತದೆ. ನಮ್ಮ ಪಕ್ಷದ ಸಂಘಟನೆ, ಹೇಗೆ ಕೆಲಸ ಮಾಡಬೇಕೆಂಬ ಬಗ್ಗೆ ಸಭೆ ನಡೆಸಿದ್ದೇನೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!