ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ದಾಳಿ, ದಾಖಲೆಗಳ ಪರಿಶೀಲನೆ ಮುಂದುವರಿದ ಕಾರಣ ಮುಡಾ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್ ಹಾಕಲಾಗಿದೆ.
ಸದ್ಯ ಮುಡಾ ಅಧಿಕಾರಿಗಳು ಇಡಿ ತನಿಖೆಗೆ ಸಹಕರಿಸುತ್ತಿರುವ ಕಾರಣ ದೈನಂದಿನ ಕಾರ್ಯಚಟುವಟಿಕೆಗಳು ನಡೆಯುತ್ತಿಲ್ಲ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಮಧ್ಯೆ, ಮೈಸೂರಿನ ಮುಡಾ ಕಚೇರಿಗೆ ಆಗಮಿಸಿದ ನಾಲ್ವರು ಇಡಿ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ.