ಶಿಗ್ಗಾವಿ, ಸಂಡೂರಿನಲ್ಲಿ ಬಿಜೆಪಿ ಕಲಿಗಳ ಹೆಸರು ರಿವೀಲ್.. ಹಾಗಿದ್ರೆ ಯಾರಿಗೆ ಸಿಕ್ತು ಟಿಕೆಟ್?!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಆದ ಬೆನ್ನಲ್ಲೇ, ಇಂದು ಶಿಗ್ಗಾಂವಿ ಮತ್ತು ಸಂಡೂರಿಗೆ ಅಭ್ಯರ್ಥಿಗಳನ್ನು ಬಿಜೆಪಿ ಹೈಕಮಾಂಡ್​ ಪ್ರಕಟಿಸಿದೆ.

ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಶಿಗ್ಗಾಂವಿ ಮತ್ತು ಸಂಡೂರು ಬಂಗಾರು ಹನುಮಂತುಗೆ ಟಿಕೆಟ್ ನೀಡಲಾಗಿದೆ. ಆದರೆ ಚನ್ನಪಟ್ಟಣದಲ್ಲಿ ಅಭ್ಯರ್ಥಿ ಹೆಸರು ಇನ್ನು ಫೈನಲ್ ಆಗಿಲ್ಲ.

ಬಸವರಾಜ ಬೊಮ್ಮಾಯಿ ಪುತ್ರ ಭರತ್​ಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದೆ. ಆ ಮೂಲಕ ಕೊನೆಗೂ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಬಸವರಾಜ ಬೊಮ್ಮಾಯಿ ಸಫಲರಾಗಿದ್ದಾರೆ.

ನವೆಂಬರ್ 13ರಂದು ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಂಗಾರು ಹನುಮಂತುಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ. ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಬಂಗಾರು ಹನುಮಂತು, ಬಿಜೆಪಿ ಎಸ್​ಟಿ ಮೋರ್ಚಾ ರಾಜ್ಯಾಧ್ಯಕ್ಷರಾಗಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!