ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣ ಮೈತ್ರಿ ಟಿಕೆಟ್ ಕದನ ಮುಂದುವರಿದಿದೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ದೋಸ್ತಿ ನಾಯಕರಲ್ಲಿ ಒಮ್ಮತ ಮೂಡಿಲ್ಲ. ಹೀಗಾಗಿ ಟಿಕೆಟ್ ಆಯ್ಕೆಯನ್ನು ಹೈಕಮಾಂಡ್ಗೆ ಬಿಡಲು ನಿರ್ಧರಿಸಲಾಗಿದೆ. ಎಚ್.ಡಿ.ಕುಮಾರಸ್ವಾಮಿ, ಆರ್.ಅಶೋಕ್, ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಯಾವುದೇ ಒಮ್ಮತ ಬರಲಿಲ್ಲ.
ಚನ್ನಪಟ್ಟಣ ಮೈತ್ರಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಇಂದು ದೆಹಲಿಯಲ್ಲಿ ಮತ್ತೊಂದು ಸಭೆ ನಡೆಯಲಿದೆ. ಇಂದಿನ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ.
ಮೈತ್ರಿ ಧರ್ಮದಂತೆ ಜೆಡಿಎಸ್ 2+1 ವಿಧಾನಕ್ಕೆ ಬದ್ಧವಾಗಿದೆ. ಜೆಡಿಎಸ್ ನಿಂದಲೇ ಪಾಲುದಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು. ಆದರೆ, ಅಭ್ಯರ್ಥಿ ಯಾರೆಂದು ಜೆಡಿಎಸ್ ನಾಯಕರು ಇನ್ನೂ ಘೋಷಿಸಿಲ್ಲ, ಆದರೆ ಜೆಡಿಎಸ್ ನಾಯಕರು, ಚನ್ನಪಟ್ಟಣ ಟಿಕೆಟ್ ಜೆಡಿಎಸ್ಗೆ ಬಿಟ್ಟುಕೊಡುವಂತೆ ಬಿಗಿಪಟ್ಟು ಹಿಡಿದಿದ್ದಾರೆ.