ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ, ತಮಗೆ ಬೇಕಾದವರ ಹೆಸರನ್ನು ಅವರೇ ಪ್ರಕಟಿಸುತ್ತಾರೆ ಎಂದು ಮಾಜಿ ಸಿಎಂ, ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಧವಳಗಿರಿ ನಿವಾಸದ ಬಳಿ ಮಾತನಾಡಿದ ಬಿಎಸ್‌ವೈ, ಚನ್ನಪಟ್ಟಣದಲ್ಲಿ ಜೆಡಿಎಸ್‌ನವರು ಯಾವ ಅಭ್ಯರ್ಥಿ ಬೇಕೋ ಘೋಷಣೆ ಮಾಡಿಕೊಳ್ತಾರೆ. ಈಗಾಗಲೇ ಅಮಿತ್ ಶಾ ಸೂಚನೆ ನೀಡಿದ್ದಾರೆ. ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ, ಅವರಿಗೆ ಯಾರು ಬೇಕೋ ಅವರ ಹೆಸರು ಘೋಷಣೆ ಮಾಡ್ತಾರೆ ಎಂದು ಹೇಳಿದ್ದಾರೆ.
ಬಿಜೆಪಿ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಘೋಷಣೆ ಮಾಡಲಿದೆ. ಮೂರೂ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಜತೆಗೂಡಿ ಗೆಲ್ಲಲೇಬೇಕೆಂದು ತೀರ್ಮಾನಿಸಲಾಗಿದೆ ಎಂದರು.