ಹೊಸದಿಗಂತ ವರದಿ ಮಂಡ್ಯ:
ಜೆಡಿಎಸ್ ಮತ್ತು ಬಿಜೆಪಿ ನಡುವೆ ಒಡಕು ಉಂಟು ಮಾಡಿ ಕಾಂಗ್ರೆಸ್ ಅಭ್ಯರ್ಥಿಗೆ ಅನುಕೂಲ ಮಾಡಿಕೊಡಲು ಕೆಲವರು ಚನ್ನಪಟ್ಟಣದಲ್ಲಿ ಷಡ್ಯಂತ್ರ ರೂಪಿಸಿದ್ದಾರೆ. ಆದರೆ, ಅವರ ಆಸೆ ಈಡೇರುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.
ಪಾಂಡವಪುರ ತಾಲೂಕು, ಸೀತಾಪುರ ಗ್ರಾಮದಲ್ಲಿ ಆಗ್ಟ್ 11ರಂದು ಭತ್ತ ನಾಟಿ ಮಾಡಿದ್ದ ಜಾಗಕ್ಕೆ ಭೇಟಿ ನೀಡಿ ಫಸಲು ವೀಕ್ಷಿಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅನ್ನು ಕಟ್ಟಿ ಹಾಕಿದ್ದಾರೆ. ಅವರ ಆಶಯದಂತೆ ನಾವು ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನಲ್ಲಿ ಕೆಲಸ ಮಾಡುತ್ತೇವೆ. ಕಾಂಗ್ರೆಸ್ ತಂತ್ರಗಾರಿಕೆ ಫಲಿಸುವುದಿಲ್ಲ ಎಂದು ಹೇಳಿದರು.