IPL 2025: ಐಪಿಎಲ್ ಮೆಗಾ ಹರಾಜಿಗೆ ಡೇಟ್ ಫಿಕ್ಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೆಗಾ ಹರಾಜಿಗಾಗಿ ಡೇಟ್ ಫಿಕ್ಸ್ ಆಗಿದೆ. ಅದರಂತೆ ಮುಂದಿನ ತಿಂಗಳು ನವೆಂಬರ್ 24 ಮತ್ತು 25 ರಂದು ಮೆಗಾ ಆಕ್ಷನ್ ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇನ್ನು ಈ ಬಾರಿಯ ಮೆಗಾ ಹರಾಜು ಅರಬ್ಬರ ನಾಡಿನಲ್ಲಿ ಆಯೋಜಿಸಲು ಬಿಸಿಸಿಐ ಚಿಂತಿಸಿದೆ.

ಐಪಿಎಲ್ ಮೆಗಾ ಹರಾಜು ಸೌದಿ ಅರೇಬಿಯಾದ ರಾಜಧಾನಿ ರಿಯಾದ್​​ನಲ್ಲಿ ನಡೆಯಲಿದೆ. ಈ ಹಿಂದೆ ಸಿಂಗಾಪುರ್, ದುಬೈ ಅಥವಾ ಲಂಡನ್​ನಲ್ಲಿ ಮೆಗಾ ಆಕ್ಷನ್ ನಡೆಯಲಿದೆ ಎಂದು ವರದಿಯಾಗಿತ್ತು. ಆದರೀಗ ಸೌದಿ ಅರೇಬಿಯಾದಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

ಇನ್ನು ಈ ಬಾರಿಯ ಮೆಗಾ ಹರಾಜಿನಲ್ಲಿ 600 ಕ್ಕೂ ಅಧಿಕ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. ನವೆಂಬರ್ ಮೊದಲ ವಾರದಲ್ಲಿ ಆಟಗಾರರ ಹೆಸರು ನೋಂದಣಿ ನಡೆಯಲಿದ್ದು, ಇದಾದ ಬಳಿಕ ಆಟಗಾರರ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಹೀಗೆ ಶಾರ್ಟ್ ಲಿಸ್ಟ್​ನಲ್ಲಿ ಸ್ಥಾನ ಪಡೆದ ಆಟಗಾರರ ಹೆಸರು ಮಾತ್ರ ಹರಾಜಿನಲ್ಲಿ ಕಾಣಿಸಿಕೊಳ್ಳಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!