ಹೊಸದಿಗಂತ ಡಿಜಿಟಲ್ ಡೆಸ್ಕ್:
ನೂರಕ್ಕೆ ನೂರರಷ್ಟು ಮೂರು ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ ಎಂದು ಉಪಚುನಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಯೋಗೇಶ್ವರ್‌ಗೆ ಕಾಂಗ್ರೆಸ್ ಸರ್ಕಾರ ಗಾಳ ಹಾಕುತ್ತಿದೆ ಎಂದು ಜೆಡಿಎಸ್ ಆರೋಪಿಸುತ್ತಿರುವ ವಿಚಾರವಾಗಿ ಮಾತನಾಡಿ, ಜೆಡಿಎಸ್‌ನವರು ಬಾಯಿಗೆ ಬಂದಂತೆ ಮಾತಾಡುತ್ತಾರೆ. ಮೊದಲು ಜೆಡಿಎಸ್‌ನವರು ಅಭ್ಯರ್ಥಿ ಘೋಷಣೆ ಮಾಡಲಿ. ಇಂದು ಸಂಜೆ ಅಥವಾ ನಾಳೆ ನಾವು ಅಭ್ಯರ್ಥಿ ಘೋಷಿಸುತ್ತೇವೆ. ನೂರಕ್ಕೆ ನೂರರಷ್ಟು ಮೂರು ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಪ್ರತಿಕ್ರಿಯಿಸಿದ್ದಾರೆ.