January20, 2026
Tuesday, January 20, 2026
spot_img

ರಾಯರನ್ನ ಅಪಮಾನ ಮಾಡಿದವರು ಉದ್ಧಾರ ಆದ ಹಿಸ್ಟರಿಯೇ ಇಲ್ಲ: ಸಿಎಂ ನಡೆಗೆ ನಟ ಜಗ್ಗೇಶ್‌ ಗರಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಭಿಮಾನಿಯೊಬ್ಬರು ಕೊಟ್ಟ ರಾಘವೇಂದ್ರ ಸ್ವಾಮಿಗಳ ಫೋಟೊ ಸ್ವೀಕರಿಸಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದು, ವಾಪಸ್ ತಳ್ಳಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ಸಿಎಂ ಕಾರಿನಲ್ಲಿ ಬರುತ್ತಿದ್ದಂತೆಯೇ ಕೆಲವು ಮಂದಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಅವರಿಗೆ ಮನವಿ ಪತ್ರ ಕೊಡಲು ಮುಂದಾಗಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಫೋಟೋ ಸಿಎಂಗೆ ಕೊಟ್ಟಿದ್ದಾರೆ. ತಕ್ಷಣವೇ ಅದನ್ನು ಆತನಿಗೆ ವಾಪಸ್ ಕೊಟ್ಟ ಸಿಎಂ ಆತನನ್ನು ದುರುಗುಟ್ಟಿ ನೋಡಿದ್ದಾರೆ. ಇದೇ ವೇಳೆ, ಚಾಣಕ್ಯನ ಕುರಿತಾದ ಪುಸ್ತಕವನ್ನು ಅಭಿಮಾನಿಯೊಬ್ಬ ಕೊಟ್ಟಿದ್ದು, ಅದನ್ನು ಸಿದ್ದರಾಮಯ್ಯ ತೆಗೆದುಕೊಂಡಿದ್ದಾರೆ. ರಾಯರ ಫೋಟೊ ತಿರಸ್ಕರಿಸಿದ್ದೂ ಚರ್ಚೆಗೆ ಗ್ರಾಸವಾಗಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯಗೆ ಹಿಂದೂ ದೇವರನ್ನು ಕಂಡರೆ ಆಗಿ ಬರಲ್ಲ. ತಿಲಕ, ನಾಮ ಹಾಗೂ ಕೃಷ್ಣನನ್ನು ಕಂಡರೇ ಆಗಿ ಬರುವುದಿಲ್ಲ. ಅವರಿಗೆ ಟೋಪಿ ಕಂಡರೆ ಮಾತ್ರ ಖುಷಿಯಾಗುತ್ತದೆ. ಟಿಪ್ಪು ಜಯಂತಿ ಮಾಡಿದರು, ಆಗ ಕೋಮು ಗಲಭೆಗಳು ಆದವು. ಕೋಗಿಲು ಲೇಔಟ್​​​ನ ಮುಸ್ಲಿಮರಿಗೆ ಮನೆಗಳು ಕೊಡುವುದು ಇತ್ಯಾದಿ ಅದು ಅವರ ನಿರಂತರ ಪ್ರಕ್ರಿಯೆ ಎಂದು ಕಿಡಿಕಾರಿದರು.

ರಾಯರನ್ನ ಅಪಮಾನ ಮಾಡಿದ ಯಾರು ಉದ್ಧಾರ ಆದ ಇತಿಹಾಸವಿಲ್ಲಾ, ರಾಯರ ಸಣ್ಣ ಕೃಪೆ ನಮ್ಮಮೇಲೆ ಬೀಳಲಿ ಎಂದು ಕೋಟ್ಯಂತರ ಭಕ್ತವೃಂದ ಜಪತಪವೈರಾಗ್ಯ ಉಪವಾಸದಿಂದ ಸೇವೆಮಾಡುತ್ತಾರೆ, ಭಕ್ತಿಯಿಂದ ಬಂದದ್ದು ಹೀಗೆ ತಿರಸ್ಕರಿಸಿದ ಪ್ರಥಮ ವ್ಯಕ್ತಿಯನ್ನು ನಾನು ನನ್ನ ಬದುಕಲ್ಲಿ ಕಂಡದ್ದು. ರಾಯರಿದ್ದಾರೆ, ಎದ್ದುಬರುತ್ತಾರೆ ಕಾಯಬೇಕು ಎಂದು ರಾಘವೇಂದ್ರ ಸ್ವಾಮಿಗಳ ಅಪ್ಪಟ ಭಕ್ತ ನಟ ಜಗ್ಗೇಶ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Must Read