ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.