ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಐವರು ಮಹಿಳಾ ಅಭ್ಯರ್ಥಿಗಳು ಸೇರಿದಂತೆ 21 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಪ್ರಕಟಿಸಿದೆ. ಜಾರ್ಖಂಡ್‌ನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಘೋಷಿಸಿದ 21 ಅಭ್ಯರ್ಥಿಗಳಲ್ಲಿ ರಾಜ್ಯದ ಹಣಕಾಸು ಸಚಿವ ರಾಮೇಶ್ವರ್ ಓರಾನ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಅಜಯ್ ಕುಮಾರ್ ಸೇರಿದ್ದಾರೆ.
ಮಾಜಿ ಪೊಲೀಸ್ ಅಧಿಕಾರಿ ಮತ್ತು ಮಾಜಿ ಜಾರ್ಖಂಡ್ ಕಾಂಗ್ರೆಸ್ ಮುಖ್ಯಸ್ಥ ರಾಮೇಶ್ವರ್ ಓರಾನ್ ಅವರನ್ನು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಲೋಹರ್ಡಗಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.
ಈ ಹಿಂದೆ ಜೆಮ್ಶೆದ್ಪುರದಿಂದ ಲೋಕಸಭಾ ಸಂಸದರಾಗಿ ಸೇವೆ ಸಲ್ಲಿಸಿರುವ ಮತ್ತು ಪ್ರಸ್ತುತ ತ್ರಿಪುರಾ, ಒಡಿಶಾ ಮತ್ತು ನಾಗಾಲ್ಯಾಂಡ್‌ಗೆ ಕಾಂಗ್ರೆಸ್ ಉಸ್ತುವಾರಿಯಾಗಿರುವ ಅಜಯ್ ಕುಮಾರ್ ಅವರು ಜೆಮ್ಶೆದ್ಪುರ ಪೂರ್ವದಿಂದ ಸ್ಪರ್ಧಿಸಲಿದ್ದಾರೆ.
ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ:
The Central Election Committee of Congress has selected the following members as party candidates for the ensuing elections to the Legislative Assembly of Jharkhand. pic.twitter.com/ZYoheX7uPO
— INC Sandesh (@INCSandesh) October 22, 2024