ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೂರು ದಿನಗಳ ಕಾಲಾವಕಾಶ ಇದೆ. ಎಲ್ಲರೂ ಒತ್ತಾಯ ಮಾಡುತ್ತಿದ್ದಾರೆ. ಸ್ಪರ್ಧೆ ಬಗ್ಗೆ ನಾನು ಚಿಂತನೆ ಮಾಡುತ್ತೇನೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಪಿ.ಯೋಗೇಶ್ವರ್ ಅವರ ನಾಮಪತ್ರ ಮತ್ತು ಕಾಂಗ್ರೆಸ್ ಭಾಗವಹಿಸುವ ಬಗ್ಗೆ ಪಕ್ಷದ ನಾಯಕತ್ವ ನಿರ್ಧರಿಸುತ್ತದೆ. ಈ ಬಗ್ಗೆ ನಾನು ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ನಾನು ಚನ್ನಪಟ್ಟಣಕ್ಕೆ ಹೋಗುತ್ತಿದ್ದೇನೆ. ಯುವಕರ ಜೊತೆ ಸಭೆ ನಡೆಸುವ ಮೂಲಕ ಪಕ್ಷ ಸಂಘಟನೆಗೆ ಬೇಕಾದ ಎಲ್ಲವನ್ನೂ ಮಾಡುತ್ತೇನೆ. ಅಭ್ಯರ್ಥಿ ಯಾರೆಂದು ಪಕ್ಷ ಘೋಷಿಸಲಿದೆ ಎಂದು ತಿಳಿಸಿದ್ದಾರೆ.