ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ.
ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾತನಾಡಿದ ಯೋಗೇಶ್ವರ್, ಸ್ಪರ್ಧೆ ವಿಚಾರ ಮುಖ್ಯ, ಇಲ್ಲಿ ಆತುರದ ನಿರ್ಧಾರ ಇಲ್ಲ. ಇಂದು ಸಂಜೆ ಪಕ್ಷದ ಚಿಹ್ನೆಯನ್ನು ನಿರ್ಧರಿಸಲಾಗುತ್ತದೆ. ಗುರುವಾರ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ.
ಸಿ ಪಿ.ಯೋಗೀಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಯಾರೇ ಆಗಲಿ ಕಾಂಗ್ರೆಸ್ಸಿನ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷಕ್ಕೆ ಸ್ವಾಗತ ಎಂದು ಸಿಎಂ ಕೂಡ ಹೇಳಿದ್ದಾರೆ. ಆದ್ರೆ ಈಗ ಯೋಗೀಶ್ವರ್ ಅವರ ಈ ನಡೆ ಭಾರೀ ಚರ್ಚೆಗೆ ಕಾರಣವಾಗುತ್ತಿದೆ.