ಸತ್ತವರ ಹೆಸರಲ್ಲಿ ಆರ್‌ಟಿಸಿ, ಕಂದಾಯ ಇಲಾಖೆ ನಿರ್ವಹಣೆ ಇದೆಯೇ?: ಸಚಿವ ಕೃಷ್ಣ ಭೈರೇಗೌಡ ಚಾಟಿ

ಹೊಸ ದಿಗಂತ ವರದಿ,ಮಂಡ್ಯ :

ರಾಜ್ಯದಲ್ಲಿ 48 ಲಕ್ಷ ಆರ್‌ಟಿಸಿಗಳು ಇಂದಿಗೂ ಸತ್ತವರ ಹೆಸರಿನಲ್ಲೇ ಮುನ್ನಡೆಯುತ್ತಿವೆ. ದಾಖಲೆಗಳ ನಿರ್ವಹಣೆ ಎಂದರೆ ಇದೇನಾ? ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧಿಕಾರಿಗಳ ವಿರುದ್ಧ ಚಾಟಿ ಬೀಸಿದರು.

ನಗರದ ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆ ವಿವಿಧ ಯೋಜನೆಗಳ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬದುಕಿರುವವರ ಹೆಸರಿನಲ್ಲಿ ಆರ್‌ಟಿಸಿಯನ್ನು ಉಳಿಸಿ ಅವುಗಳಿಗೆ ಜೀವ ನೀಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ತಹಸೀಲ್ದಾರ್‌ಗಳು, ಕಂದಾಯಾಧಿಕಾರಿಗಳು ಸ್ವಲ್ಪ ಶ್ರಮವಹಿಸಿ ಕೆಲಸ ಮಾಡಿದರೆ ಇದು ಸಾಧ್ಯವಾಗಲಿದೆ ಎಂದು ಸಲಹೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!