ಬೆಂಗಳೂರಿನಲ್ಲಿ ಭಾರೀ ಮಳೆಗೆ ಕುಸಿದ ಕಟ್ಟಡ: ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನಲ್ಲಿ ಹಲವಾರು ಅವಘಡಗಳು ಸಂಭವಿಸುತ್ತಿವೆ. ಮಂಗಳವಾರ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಐದು ಜನ ಮೃತಪಟ್ಟಿರುವ ಘಟನೆ ನಡೆದಿದೆ.

ನಿರ್ಮಾಣ ಹಂತದ ಕಟ್ಟಡ ದುರಂತ ಪ್ರಕರಣದಲ್ಲಿ ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ರಾತ್ರಿಇಡೀ ಅವಶೇಷಗಳಡಿ ಸಿಲುಕಿದವರ ಪತ್ತೆಕಾರ್ಯ ನಡೆಯಿತು. ಮಧ್ಯರಾತ್ರಿ ಮೂವರ ಮೃತದೇಹಗಳು ಪತ್ತೆಯಾಗಿದ್ದು, ಇನ್ನು ಕೆಲವರು ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಹೊರ ತೆಗೆಯಲು ಜೆಸಿಬಿ, ಹಿಟಾಚಿಗಳ ಮೂಲಕ ಕುಸಿದ ಕಟ್ಟಡದ ಅವಶೇಷಗಳನ್ನು ತೆರವು ಮಾಡುವ ಕಾರ್ಯಾಚರಣೆ ನಡೆಯುತ್ತಿದೆ.

ಕಾಮಗಾರಿಯ ವೇಳೆಗೆ 16 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೂಲಿ ಕಾರ್ಮಿಕರು ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು ಸ್ಥಳಕ್ಕೆ ರಕ್ಷಣಾ ಕಾರ್ಯಾಚರಣೆ ತಂಡ ಭೇಟಿ ನೀಡಿ ಅವಶೇಷಗಳನ್ನು ತೆಗೆಯುವ ಕೆಲಸ ನಡೆಸುತ್ತಿದ್ದಾರೆ. 6 ಮಂದಿ ಕಾರ್ಮಿಕರಿಗೆ ತೀವ್ರ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!