ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಮಾರು 5 ವರ್ಷಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಷಿ ಜಿನ್‌ಪಿಂಗ್ ಮಧ್ಯೆ ದ್ವಿಪಕ್ಷೀಯ ಸಭೆ ನಡೆಯಲಿದೆ.
ರಷ್ಯಾದ ಕಜಾನ್‌ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ಭಾಗವಾಗಿ ಇಬ್ಬರು ನಾಯಕರ ಮಧ್ಯೆ ಮಹತ್ವದ ಮಾತುಕತೆ ನಡೆಯಲಿದೆ. ಐದು ವರ್ಷಗಳ ಬಳಿಕ ಉಭಯ ನಾಯಕರ ನಡುವಿನ ಮೊದಲ ಔಪಚಾರಿಕ ಭೇಟಿ ಇದಾಗಿದೆ.
ಮಂಗಳವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಭಾರತ ಮತ್ತು ಚೀನಾ ಮಧ್ಯೆ ಸಭೆ ನಡೆಯಲಿದೆ ಎಂದು ತಿಳಿಸಿದರು.
2020 ರಲ್ಲಿ ನಡೆದ ಗಲ್ವಾನ್ ಘರ್ಷಣೆಯ ಬಳಿಕ ಭಾರತ ಹಾಗೂ ಚೀನಾ ಮಧ್ಯೆ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸತತ 4 ವರ್ಷಗಳಿಂದ ಭಾರತ ಮತ್ತು ಚೀನಾ ಜೊತೆಗಿನ ಮಾತುಕತೆ ಯಶಸ್ವಿಯಾಗಿದೆ. ಶಾಂತಿ ನೆಲೆಸದಿದ್ದರೆ ಚೀನಾ ಜೊತೆಗೆ ಶಾಂತಿ ಮಾತುಕತೆ ಸಾಧ್ಯವಿಲ್ಲ ಎಂದು ಭಾರತ ಹೇಳಿತ್ತು.
ಪೂರ್ವ ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಗಸ್ತು ತಿರುಗುವ ಕುರಿತು ಭಾರತ ಮತ್ತು ಚೀನಾದ ಸಂಧಾನಕಾರರು ಒಪ್ಪಂದಕ್ಕೆ ಬಂದಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಸೋಮವಾರ ತಿಳಿಸಿದ್ದರು