ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನವರಿ ಕೊನೆಯ ವಾರದಲ್ಲಿ ಬ್ಯಾಂಕ್ ಗ್ರಾಹಕರಿಗೆ ತೊಂದರೆ ಎದುರಾಗುವ ಸಾಧ್ಯತೆ ಇದೆ. ವಾರಾಂತ್ಯದ ನಿರಂತರ ರಜೆಗಳು ಹಾಗೂ ಬ್ಯಾಂಕ್ ಸಿಬ್ಬಂದಿ ಮುಷ್ಕರದ ಹಿನ್ನೆಲೆಯಲ್ಲಿ ಜನವರಿ 24ರಿಂದ 27ರವರೆಗೆ ನಾಲ್ಕು ದಿನಗಳ ಕಾಲ ಬ್ಯಾಂಕ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ.
ಜನವರಿ 24ರಂದು ನಾಲ್ಕನೇ ಶನಿವಾರ, 25 ಭಾನುವಾರ ಮತ್ತು 26 ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬ್ಯಾಂಕ್ಗಳಿಗೆ ರಜೆ ಇದೆ. ಇದಕ್ಕೆ ಜೊತೆಗೆ, ವಾರದಲ್ಲಿ ಐದು ದಿನ ಕೆಲಸದ ವ್ಯವಸ್ಥೆ ಜಾರಿಗೆ ತರಬೇಕೆಂಬ ಬೇಡಿಕೆ ಮುಂದಿಟ್ಟು ಬ್ಯಾಂಕ್ ಸಿಬ್ಬಂದಿ ಜನವರಿ 27ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರ ಪರಿಣಾಮವಾಗಿ ನಾಲ್ಕು ದಿನಗಳ ಕಾಲ ಶಾಖಾ ಬ್ಯಾಂಕ್ ಸೇವೆಗಳು ಸ್ಥಗಿತಗೊಳ್ಳಲಿವೆ.
ಈ ಅವಧಿಯಲ್ಲಿ ಮೊಬೈಲ್ ಬ್ಯಾಂಕಿಂಗ್ ಮತ್ತು ಇಂಟರ್ನೆಟ್ ಬ್ಯಾಂಕಿಂಗ್ ಸೇವೆಗಳು ಕಾರ್ಯನಿರ್ವಹಿಸಿದರೂ, ನಗದು ವಿತ್ಡ್ರಾ, ಚೆಕ್ ಕ್ಲಿಯರೆನ್ಸ್, ಡಿಮ್ಯಾಂಡ್ ಡ್ರಾಫ್ಟ್ ಸೇರಿದಂತೆ ಹಲವು ಪ್ರಮುಖ ಸೇವೆಗಳು ಲಭ್ಯವಿರದ ಸಾಧ್ಯತೆ ಇದೆ.


