ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಕಟ್ಟಡ ಕುಸಿತದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಸಂತ್ರಸ್ತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಈ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. 8 ಜನರನ್ನು ರಕ್ಷಿಸಲಾಗಿದೆ. ಮೃತರ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ ಪರಿಹಾರ ನೀಡಲಾಗಿದೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.