ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡದ ಐತಿಹಾಸಿಕ ಸಿನಿಮಾ ಹಲಗಲಿ ಚಿತ್ರಕ್ಕೆ ಡಾಲಿ ಧನಂಜಯ ಹೈಲೆಟ್ ಅನ್ನೋದು ಎಲ್ಲರಿಗೂ ಗೊತ್ತು. ಈಗ ಆ ಚಿತ್ರಕ್ಕೆ ನಾಯಕಿಯಾಗಿ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಅವರು ಆಯ್ಕೆಯಾಗಿದ್ದಾರೆ.
ಸುಕೇಶ್ ಡಿ ಕೆ ನಿರ್ದೇಶನದ ಯುವ ಉದ್ಯಮಿ ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ ನಿರ್ಮಾಣದ ಬಹು ತಾರಾಗಣದ ಅದ್ಧೂರಿ ಬಜೆಟ್ ಚಿತ್ರ ‘ಹಲಗಲಿ’ ಈಗಾಗಲೇ ಸಾಕಷ್ಟು ಸದ್ದು ಮಾಡಿದ್ದು, ಚಿತ್ರೀಕರಣಕ್ಕೆ ಅಣಿಯಾಗುತ್ತಿದೆ.
ಎರಡು ಭಾಗಗಳಲ್ಲಿ, ಮೂಡಿ ಬರಲಿರುವ ಈ ಸಿನಿಮಾ ಕೋಟಿ ವೆಚ್ಚದಲ್ಲಿ ತಯಾರಾಗುತ್ತಿದೆ ಎಂಬುದು ವಿಶೇಷ. ಐದು ಭಾಷೆಯಲ್ಲಿ ಅದ್ದೂರಿಯಾಗಿ ಸೆಟ್ಟೇರಿರುವ ಕನ್ನಡದ ಐತಿಹಾಸಿಕ ಸಿನಿಮಾದಲ್ಲಿ ಕನ್ನಡ ಸೇರಿದಂತೆ ಬಹುಭಾಷಾ ನಟರೂ ಇರಲಿದ್ದಾರೆ. ಕನ್ನಡ ಸೇರಿ ಐದು ಭಾಷೆಯಲ್ಲಿ ಮೂಡಿ ಬರುತ್ತಿರುವ ಕನ್ನಡ ನಾಡಿನ ಸ್ವಾತಂತ್ರ್ಯ ಪೂರ್ವದ ವೀರರ ಕಥೆ ಇದಾಗಿದ್ದು, ಸಿನಿಮಾಗೆ ಬೇಕಾದ ಎಲ್ಲಾ ತಯಾರಿ ಮಾಡಿಕೊಂಡು ಚಿತ್ರೀಕರಣಕ್ಕೆ ಹೊರಡುವ ಉತ್ಸಾಹದಲ್ಲಿದೆ ಚಿತ್ರತಂಡ.