ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಿದೆ.
ಶಾಸಕ ಸತೀಶ್ ಸೈಲ್ ಸೇರಿದಂತೆ ಎಲ್ಲಾ ಆರೋಪಿಗಳು ದೋಷಿ ಎಂದು ಒಟ್ಟು ಆರು ಪ್ರಕರಣಗಳಲ್ಲಿ ಮೂರು ಕೇಸ್ ಗಳ ತೀರ್ಪು ಪ್ರಕಟಿಸಲಾಗಿದೆ.
ಆರೋಪಿಗಳನ್ನು ಕಸ್ಟಡಿಗೆ ಪಡೆಯಲು ಕೋರ್ಟ್ ಸೂಚನೆ ನೀಡಿದೆ. ನಾಳೆ ಶಿಕ್ಷೆಯ ಪ್ರಮಾಣವನ್ನು ಕೋರ್ಟ್ ಘೋಷಿಸಲಿದೆ.
ಜಪ್ತಿಯಾಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೆ ಅಕ್ರಮವಾಗಿ ಸಾಗಿಸಲಾಗಿತ್ತು. ಎಲ್ಲರೂ ದೋಷಿ ಎಂದು 82ನೇ ಸಿಸಿಹೆಚ್ ಜನಪ್ರತಿನಿಧಿಗಳ ಕೋರ್ಟ್ ಹೇಳಿದ್ದು, ಎಲ್ಲಾ ಅಪರಾಧಿಗಳನ್ನು ಕಸ್ಟಡಿಗೆ ಪಡೆಯಲು ಆದೇಶ ಹೊರಡಿಸಲಾಗಿದೆ.