ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್ನಲ್ಲಿ ಸೇನಾ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ವೇಳೆ ಕನಿಷ್ಠ ಐವರು ಯೋಧರು ಗಾಯಗೊಂಡಿದ್ದಾರೆ.
ಬೋಟಪತ್ರಿ ಪ್ರದೇಶದಲ್ಲಿ ಭಯೋತ್ಪಾದಕರು ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಪುಲ್ವಾಮಾ ಜಿಲ್ಲೆಯ ಬಟ್ಗುಂಡ್ ತ್ರಾಲ್ ಪ್ರದೇಶದಲ್ಲಿ ಭಯೋತ್ಪಾದಕರು ಕಾರ್ಮಿಕನೊಬ್ಬನ ಮೇಲೆ ಗುಂಡು ಹಾರಿಸಿ ಗಾಯಗೊಂಡ ಕೆಲವೇ ಗಂಟೆಗಳ ನಂತರ ಈ ದಾಳಿ ನಡೆದಿದೆ .