ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಮೂರು ಹೊಟೇಲ್ಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ.
ಪೊಲೀಸರು ಮತ್ತು ಶ್ವಾನದಳಗಳು ಸ್ಥಳಕ್ಕೆ ಧಾವಿಸಿ ಪ್ರದೇಶವನ್ನು ಶೋಧಿಸಿದರೂ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ. ನಂತರ ಬೆದರಿಕೆ ಸಂದೇಶ ಸುಳ್ಳು ಎಂದು ತಿಳಿದುಬಂದಿದೆ.
ಇಮೇಲ್ ಸಂದೇಶದಲ್ಲಿ ಈ ವರ್ಷದ ಫೆಬ್ರವರಿಯಲ್ಲಿ ಬಂಧಿತ ಮಾದಕವಸ್ತು ಕಳ್ಳಸಾಗಣೆದಾರ ಜಾಫರ್ ಸಿದ್ದಿಕ್ ಹೆಸರನ್ನು ಉಲ್ಲೇಖಿಸಲಾಗಿದೆ ಮತ್ತು ಬೆದರಿಕೆಯ ಮೂಲವನ್ನು ಕಂಡುಹಿಡಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.