ಹೊಸದಿಗಂತ ರಾಮನಗರ :
ಸಾವಿರಾರು ಕಾರ್ಯಕರ್ತರು ಅಣತಿಯಂತೆ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಆಯ್ಕೆ ಮಾಡಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಆಶೋಕ ತಿಳಿಸಿದರು.
ರಾಮನಗರದ ಖಾಸಗಿ ಹೋಟೆಲ್‌ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಖಿಲ್‌ಕುಮಾರಸ್ವಾಮಿ ಕಣಕ್ಕಿಳಿಯದೇ ನನಗೆ ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದರು ಆದರೆ ಹಿರಿಯ ನಾಯಕ ದೇವೇಗೌಡರು ಮತ್ತು ಹಿರಿಯ ನಾಯಕರಾದ ಬಿ ಎಸ್ ಯಡಿಯೂರಪ್ಪ ಅವರು ನೀನು ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಒತ್ತಾಯ ಮಾಡಿದರ ಮೂಲಕ ಅವರು ನಾಯಕರ ಮಾತಿಗೆ ಮನ್ನಣೆ ನೀಡಿ ಸ್ವಧೆ೯ ಮಾಡಲು ಒಪ್ಪಿಗೆ ಸೂಚಿಸಿದರು ಎಂದು ಹೇಳಿದರು.
ನಮ್ಮ ಬಿಜೆಪಿ ಕಾರ್ಯಕರ್ತರು ಸಂಘಟಿತರಾಗಿ ಅವರ ಜೊತೆ ಕೆಲಸ ಮಾಡುವ ನಿಟ್ಟಿನಲ್ಲಿ ನಮ್ಮ ಪಕ್ಷದ ಎಲ್ಲ ಮುಖಂಡರು ಹಾಗೂ ರಾಜ್ಯ ಮಟ್ಟದ ನಾಯಕರಗಳು ಒಟ್ಟಿಗೆ ಸೇರಿ ಶಕ್ತಿ ಮೀರಿ ನಿಖಿಲ್‌ಕುಮಾರಸ್ವಾಮಿ ಗೆಲುವಿನಲ್ಲಿ ಶ್ರಮ ವಹಿಸಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಮಾಜಿ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ, ಆನಂದಸ್ವಾಮಿ, ಹುಲ್ಲುವಾಡಿ ದೇವರಾಜು, ರವೀಶ್, ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.