ಹೊಸದಿಗಂತ ವರದಿ ಹುಬ್ಬಳ್ಳಿ:
ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿ ಅವರು ಈಗ ಅವರೇ ಕುಟುಂಬ ರಾಜಕಾರಣಕ್ಕೆ ಬಲಿಯಾಗುತ್ತಿದ್ದಾರೆ ಎಂದು ಸಚಿವ ಸತೀಶ ಜಾರಕಿಹೊಳಿ ಬಿಜೆಪಿ ವಿರುದ್ಧ ಹರಿಹಾಯ್ದರು.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಗಾಂಧಿ ಅವರ ಬಗ್ಗೆ ಮಾತನಾಡುತ್ತಿದ್ದರು. ಬಿಜೆಪಿಯಲ್ಲಿಯೂ ಸಹ ಸುಮಾರು ಐದಾರು ಕುಟುಂಬಗಳು ರಾಜಕಾರಣ ಮಾಡುತ್ತಿವೆ. ರಾಜಕೀಯದಲ್ಲಿ ಇದು ಸ್ವಾಭಾವಿಕ. ಏನು ಮಾಡಲು ಸಾಧ್ಯವಿಲ್ಲ ಎಂದರು.
ಶಿಗ್ಗಾವಿ ವಿಧಾನ ಸಭಾ ಕ್ಷೇತ್ರದಲ್ಲಿ ಅಜ್ಜಂಪೀರ ಖಾದ್ರಿ ಬಂಡಾಯವಾಗಿ ಸ್ಪರ್ಧಿಸುವ ಬಗ್ಗೆ ಮಾಹಿತಿ ಇಲ್ಲ. ಟಿಕೆಟ್ ದೊರೆಯದವರು ಪ್ರತಿಭಟನೆ ಮಾಡುವುದು ಸ್ವಾಭಾವಿಕ. ಈ ಬಗ್ಗೆ ಕಾರ್ಯದರ್ಶಿಗಳು ನೋಡಿಕೊಳ್ಳುತ್ತಾರೆ. ಶಿಗ್ಗಾವಿಯಲ್ಲಿ ಆಕಾಂಕ್ಷಿಗಳು ಹೆಚ್ಚುವುದರಿಂದ ಟಿಕೆಟ್ ಹಂಚಿಕೆ ತಡವಾಗಿದೆ ಎಂದು ಸ್ಪಷ್ಟಪಡಿಸಿದರು.
ಮಾಜಿ ಸಚಿವ ಎಸ್.ಟಿ. ಸೋಮಶೇಖರ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ಸದ್ಯ ನಮ್ಮ ಗುರಿ ಉಪಚುನಾವಣೆ ಮಾತ್ರ. ಗೆಲುವಿಗೆ ಶತ ಪ್ರಯತ್ನ ಮಾಡುತ್ತೇವೆ. ಇಡೀ ಪಕ್ಷ ಶಿಗ್ಗಾವಿ ಕ್ಷೇತ್ರದ ಗೆಲುವಿಗೆ ಶ್ರಮಿಸಲಿದೆ. ಕಳೆದ ೨೫ ವರ್ಷದಿಂದ ನಾವು ಇಲ್ಲಿ ಗೆದ್ದಿಲ್ಲ. ಈ ಬಾರಿ ಗೆಲ್ಲಲು ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.