ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮ್ಮ 115ನೇ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಡಿಜಿಟಲ್ ಆಕ್ರಮಣ, ಅನಿಮೇಷನ್, ಮಹಾನ್ ವ್ಯಕ್ತಿಗಳ ಜಯಂತಿ, ಸ್ವಾವಲಂಬನೆ, ಕಲೆ ಮತ್ತು ಸಂಸ್ಕೃತಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಿಂದ ತೆಲಂಗಾಣದವರೆಗೆ ವಿವಿಧ ಕಲಾವಿದರನ್ನು ಉಲ್ಲೇಖಿಸಿ ಹೊಗಳಿದರು. ಆನ್‌ಲೈನ್ ವಂಚನೆ ಮತ್ತು ವಂಚಕರು ಬಳಸುವ ವಿಧಾನಗಳ ಬಗ್ಗೆ ಪ್ರಧಾನಿ ವಿವರವಾದ ಮಾಹಿತಿಯನ್ನು ಒದಗಿಸಿದರು ಮತ್ತು ಜನರು ಎಚ್ಚರಿಕೆಯಿಂದ ಇರುವಂತೆ ಒತ್ತಾಯಿಸಿದರು.
ಕಾನೂನಿನಲ್ಲಿ ಡಿಜಿಟಲ್ ಅರೆಸ್ಟ್ ಅನ್ನೋ ವ್ಯವಸ್ಥೆಯೇ ಇಲ್ಲ. ಡಿಜಿಟಲ್ ಅರೆಸ್ಟ್ ಮಾಡಿದ್ದೇವೆ ಎನ್ನುವುದು ಬರೀ ಸುಳ್ಳು. ಕ್ರಿಮಿನಲ್ ಗ್ಯಾಂಗ್ಗಳು, ವಂಚಕರು ಮಾಡುವ ಕೆಲಸವದು ಎಂದು ನರೇಂದ್ರ ಮೋದಿ ಹೇಳಿದ್ದಾರೆ.
ಆನ್‌ಲೈನ್ ವಂಚನೆ ಹೇಗಿರುತ್ತದೆ ಎಂಬುದಕ್ಕೆ ಉದಾಹರಣೆಯನ್ನೂ ನೀಡಿದ ಅವರು. ವಂಚಕರು ಪೊಲೀಸ್, ಸಿಬಿಐ, ನಾರ್ಕೋಟಿಕ್ಸ್ ಬ್ಯೂರೋ ಅಥವಾ ಆರ್‌ಬಿಐ ಅಧಿಕಾರಿಗಳಿಗೆ ಕರೆ ಮಾಡಿ ಅವರಂತೆ ನಟಿಸಬಹುದು. ನಿಮ್ಮ ಮಗಳು ದಿಲ್ಲಿಯಲ್ಲಿ ಓದುತ್ತಿದ್ದಾರೆ ಅಲ್ವಾ? ಇತ್ಯಾದಿ ನಿಮ್ಮ ವೈಯಕ್ತಿಕ ಜೀವನದ ಮಾಹಿತಿಯನ್ನು ಅವರು ಪತ್ತೆ ಮಾಡುತ್ತಾರೆ. ನಿಮ್ಮ ಮೇಲೆ ಕೇಸ್ ದಾಖಲಿಸಲಾಗುತ್ತಿದೆ ಇತ್ಯಾದಿ ಬೆದರಿಕೆ ಹಾಕಬಹುದು ಎಂದು ಈ ಮೂಲಕ ಉದಾಹರಣೆ ನೀಡಿದರು.