ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು-ಅಯೊಧ್ಯೆ ನಡುವೆ ಸಂಚರಿಸುವ ವಿಮಾನಕ್ಕೂ ಬಾಂಬ್ ಬೆದರಿಕೆ ಹಾಕಲಾಗಿದೆ.
ಬೆಂಗಳೂರು-ಅಯೋಧ್ಯೆ ನಡುವಿನ ವಿಮಾನಕ್ಕೆ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ವಿಮಾನವನ್ನು ಅಯೋಧ್ಯೆ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಮರ್ಜನ್ಸಿ ಲ್ಯಾಂಡಿಂಗ್ ಮಾಡಲಾಗಿದೆ.
ಬಳಿಕ ವಿಮಾನದಲ್ಲಿ ಪರಿಶೀಲನೆ ನಡೆಸಲಾಗಿದೆ. ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಅಯೋಧ್ಯೆ ವಿಮಾನ ನಿಲ್ದಾಣ ಸಿಬ್ಬಂದಿಗಳು ಸ್ಪಷ್ಟಪಡಿಸಿದ್ದಾರೆ.