BOMB THREAT | ತಿರುಪತಿಯ ಇಸ್ಕಾನ್ ದೇಗುಲಕ್ಕೆ ಬಾಂಬ್ ಬೆದರಿಕೆ ಸಂದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಆಂಧ್ರಪ್ರದೇಶದ ತಿರುಪತಿಯ ಹೋಟೆಲ್​​ಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದ ಬೆನ್ನಲ್ಲೇ ಇದೀಗ ಜಿಲ್ಲೆಯ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಈ ಹಿನ್ನೆಲೆಯಲ್ಲಿ ದೇಗುಲದ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪೊಲೀಸರ ಪ್ರಕಾರ, ಇಸ್ಕಾನ್ ದೇವಾಲಯದ ಸಿಬ್ಬಂದಿಗೆ ಅಕ್ಟೋಬರ್ 27 ರಂದು ಬೆದರಿಕೆ ಸಂದೇಶ ಬಂದಿದೆ.

ಪಾಕಿಸ್ತಾನದ ಐಎಸ್ಐ ಜತೆ ನಂಟು ಹೊಂದಿರುವ ಭಯೋತ್ಪಾದಕರು ದೇವಾಲಯವನ್ನು ಸ್ಫೋಟಿಸಲಿದ್ದಾರೆ ಎಂದು ದೇಗುಲದ ಸಿಬ್ಬಂದಿಗೆ ಇ-ಮೇಲ್ ಸಂದೇಶ ಬಂದಿದೆ.

ಬೆದರಿಕೆ ಇ-ಮೇಲ್ ಬಂದ ಬೆನ್ನಲ್ಲೇ, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದ ತಂಡಗಳು ಸ್ಥಳಕ್ಕೆ ತಲುಪಿದ್ದು, ದೇವಾಲಯದಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಿವೆ. ಆದರೆ, ದೇವಸ್ಥಾನದ ಆವರಣದಲ್ಲಿ ಸ್ಫೋಟಕ ಅಥವಾ ಇತರ ಯಾವುದೇ ಆಕ್ಷೇಪಾರ್ಹ ವಸ್ತುಗಳು ಪತ್ತೆಯಾಗಿಲ್ಲ. ದೇವಸ್ಥಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!