ರಾಯಚೂರು ವಿವಿಗೆ ‘ಮಹರ್ಷಿ ವಾಲ್ಮೀಕಿ’ ಎಂದು ಮರುನಾಮಕರಣ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್;

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಯಚೂರು ವಿವಿಗೆ ‘ಮಹರ್ಷಿ ವಾಲ್ಮೀಕಿ’ ಎಂದು ಮರು ನಾಮಕರಣ ಮಾಡಲು ನಿರ್ಧರಿಸಿದೆ.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ಮರು ನಾಮಕರಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿಯವರ ಹೆಸರು ನಾಮಕರಣ ಮಾಡಲಾಗುವುದು ಎಂದು ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಘೋಷಿಸಿದ್ದರು. ಪರಿಶ್ರಮದ ಮೂಲಕ ಸಾಧನೆಯ ಶಿಖರವನ್ನೇರಿದ ವಾಲ್ಮೀಕಿಯವರ ಹೆಸರು ಮತ್ತು ಬದುಕು ಅಜರಾಮರವಾಗಲಿ ಎಂಬುದು ನನ್ನ ಉದ್ದೇಶವಾಗಿದೆ . ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ಮರು ನಾಮಕರಣ ಮಾಡಲಾಗುತ್ತದೆ ಎಂದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!