ಮುಡಾ ಮಾಜಿ ಆಯುಕ್ತರ ಮನೆಗೆ ಇಡಿ ದಾಳಿ: ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಆತಂಕ

ಹೊಸದಿಗಂತ ಡಿಜಿಟಲ್ ಡೆಸ್ಕ್;

ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮಪ್ರಕಟಣದಲ್ಲಿ ಇಡಿ ಅಧಿಕಾರಿಗಳು ಪ್ರವೇಶಿಸಿದೆ. ಈಗಾಗಲೇ ಹಲವರಿಗೆ ನೋಟಿಸ್ ನೀಡಿ ಮಹತ್ವದ ಮಾಹಿತಿ ಕಲೆ ಹಾಕುತ್ತಿದೆ. ಇದರ ನಡುವೆ, ಇಡಿ ಅಧಿಕಾರಿಗಳು ಬೆಂಗಳೂರಿನ ಜೆ.ಪಿ‌.ನಗರದಲ್ಲಿರುವ ಬಿಲ್ಡರ್​ ಎನ್​. ಮಂಜುನಾಥ್​ ಮನೆ ಮೇಲೆ ದಾಳಿ ಮಾಡಿದೆ.

ಇದರ ಬೆನ್ನಲ್ಲೇ ಇದೀಗ ಮುಡಾ ಮಾಜಿ ಆಯುಕ್ತ ನಟೇಶ್ ಮನೆ ಮೇಲೆ ಸಹ ಇಡಿ ದಾಳಿಯಾಗಿದ್ದು, ಇತ್ತ ಪ್ರಕರಣ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಸಹ ಯಾವಾಗ ಇಡಿ ದಾಳಿ ಆಗುತ್ತೋ ಎನ್ನುವ ಆತಂಕದಲ್ಲಿದ್ದಾರೆ.

ಇಂದು ಬೆಂಗಳೂರಿನ ಜೆ.ಪಿ‌.ನಗರದಲ್ಲಿರುವ ಬಿಲ್ಡರ್​ ಎನ್​. ಮಂಜುನಾಥ್​ ಮನೆ ಮೇಲೆ ಇಡಿ ದಾಳಿ ಮಾಡಿದೆ. ಇದರ ಜೊತೆಗೆ ಈಗ ಬೆಂಗಳೂರಿನ ಮಲ್ಲೇಶ್ವರಂನ 10ನೇ ಕ್ರಾಸ್​ನಲ್ಲಿರುವ ಮುಡಾ ಮಾಜಿ ಆಯುಕ್ತ ನಟೇಶ್ ನಿವಾಸದ ಮೇಲೂ ಸಹ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಟೇಶ್ ಮನೆಯಲ್ಲೇ ಇದ್ದ ಸಂದರ್ಭದಲ್ಲಿ ಐವರು ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಇದರಿಂದ ಮುಡಾ ಹಗರಣ ಪ್ರಕರಣದ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಸಹ ಯಾವ ಸಂದರ್ಭದಲ್ಲಿ ಇಡಿ ದಾಳಿ ಮಾಡುತ್ತೋ ಎನ್ನುವ ಆತಂಕ ಶುರುವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!