ಹೊಸದಿಗಂತ ಡಿಜಿಟಲ್ ಡೆಸ್ಕ್;
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಇಡಿ ಅಧಿಕಾರಿಗಳು ಮುಡಾ ಮಾಜಿ ಆಯುಕ್ತರ ಮನೆಗಳ ಮೇಲೆ ದಾಳಿ ನಡೆಸಿದೆ. ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಮಾಪ್ತ ರಾಕೇಶ್ ಪಾಪಣ್ಣ ಮನೆ ಮೇಲೂ ಸಹ ದಾಳಿಯಾಗಿದೆ.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಸಿಎಂ ಸಿದ್ದರಾಮಯ್ಯ ಆಪ್ತರಾಗಿರುವ ರಾಕೇಶ್ ಪಾಪಣ್ಣ ಅವರ ಮೈಸೂರಿನ ಹಿನ್‌ಕಲ್ ಗ್ರಾಮದಲ್ಲಿನ ಮನೆ ಮೇಲೆ ಇಡಿ ದಾಳಿ ಮಾಡಿದೆ. 50-50 ನಿಯಮದಲ್ಲಿ 20ಕ್ಕೂ ಹೆಚ್ಚು ಮುಡಾ ಸೈಟ್ ಪಡೆದಿದ್ದ ಆರೋಪ ರಾಕೇಶ್ ಪಾಪಣ್ಣ ಅವರ ವಿರುದ್ಧ ಕೇಳಿಬಂದಿದೆ. ಹೀಗಾಗಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ರಾಕೇಶ್ ಪಾಪಣ್ಣ ಇರಿಸಿಕೊಂಡು ವಿಚಾರಣೆ ನಡೆಸಿದ್ದಾರೆ.
ಸಿದ್ದರಾಮಯ್ಯ ಅವರು ಪಾಪಣ್ಣ ಕುಟುಂಬದಿಂದ 10 ಗುಂಟೆ ಜಾಗ ಪಡೆದು ಮನೆ ಕಟ್ಟಿದ್ದರು. ಈ ವಿಚಾರದಲ್ಲಿ ಅಕ್ರಮ ಆರೋಪ ಕೇಳಿ ಬಂದಿತ್ತು. ನಂತರ ಸಿದ್ದರಾಮಯ್ಯನವರು ಆ ಮನೆ ಮಾರಾಟ ಮಾಡಿದ್ದು, ಸದ್ಯ ಪ್ರಕರಣ ಸುಪ್ರೀಂಕೋರ್ಟ್ ಅಂಗಳದಲ್ಲಿದೆ.ಈ ಎಲ್ಲಾ ಆರೋಪಗಳು ಕೇಳಿಬಂದಿದ್ದರಿಂದ ಇಂದು (ಅಕ್ಟೋಬರ್ 28) ಇಡಿ ಅಧಿಕಾರಿಗಳು ರಾಕೇಶ್ ಪಾಪಣ್ಣ ಅವರ ಮನೆ ಮೇಲೆ ದಾಳಿ ಮಾಡಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಈ ಬಗ್ಗೆ ರಾಕೇಶ್ ಪಾಪಣ್ಣ ಅವರ ಬಳಿಯೂ ಮಾಹಿತಿ ಕಲೆಹಾಕುತ್ತಿದ್ದಾರೆ.