ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿಧಿಗಾಗಿ ಪಾಪಿ ತಂದೆ ತನ್ನ ಮಗುವನ್ನು ಬಲಿ ಕೊಡಲು ಮುಂದಾದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕೆಆರ್ ಪುರಂನಲ್ಲಿ ಈ ಘಟನೆ ನಡೆದಿದೆ. ಸದ್ದಾಂ ಎಂಬಾತ ಸಂಪತ್ತನ್ನು ಗಳಿಸಲು ಮಾಟ ಮಂತ್ರಗಳನ್ನು ಬಳಸಿನಿಧಿ ಆಸೆಗಾಗಿ ಕುಟ್ಟಿ ಸೈತಾನ್ ಪೂಜೆಯಲ್ಲಿ ತನ್ನ ಮಗುವನ್ನು ಬಲಿಕೊಡಲು ಮುಂದಾಗಿದ್ದು, ಬಲಿ ನೀಡುವಂತೆ ತನ್ನ ಪತ್ನಿಗೆ ಕಿರುಕುಳ ನೀಡಿದ್ದಾನೆ ಎಂದು ವರದಿಯಾಗಿದೆ.
ಮಂತ್ರ ಪಠಿಸುತ್ತಾ ಸದ್ಧಾಂ ತಡರಾತ್ರಿ ವಾಮಾಚಾರ ಅಭ್ಯಾಸ ಮಾಡುತ್ತಿದ್ದನು ಎನ್ನಲಾಗಿದೆ. ಪತಿ ಕಿರುಕುಳಕ್ಕೆ ಬೇಸತ್ತು ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದ್ದು, ಈ ಪ್ರಕರಣದ ಕುರಿತು ತನಿಖೆ ಮುಂದುವರೆದಿದೆ.