ಹೊಸದಿಗಂತ ಡಿಜಿಟಲ್ ಡೆಸ್ಕ್:
ವರ್ಷಕ್ಕೊಮ್ಮೆ ಮಾತ್ರ ದರುಶನ ನೀಡುವ ಹಾಸನಾಂಬೆಯನ್ನು ಕಾಣಲು ದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಾರೆ. ಇಂದು ಸಿಎಂ ಸಿದ್ದರಾಮಯ್ಯ ಹಾಸನಾಂಬ ದೇವಿಯ ದರುಶನ ಪಡೆದು ವಿಶೇಷ ಪೂಜೆ ಮಾಡಿಸಿದ್ದಾರೆ.
ಪೂಜೆಯ ವೇಳೆ ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರದ ಮೂಲಕ ಸಿಎಂ ಅರ್ಚನೆ ಮಾಡಿಸಿದ್ದಾರೆ. ಹಾಸನಾಂಬೆ ದೇವಿ ದರ್ಶನ ಪಡೆಯುವಾಗ ಅಷ್ಟೋತ್ತರದಿಂದ ಪೂಜೆ ಮಾಡುವುದು ವಾಡಿಕೆ. ಈ ಬಾರಿ ಖಡ್ಗಮಾಲಾ ಸ್ತೋತ್ರದ ಮೂಲಕ ದೇವಿಯನ್ನು ಅರ್ಚಿಸಿದ್ದು ವಿಶೇಷವಾಗಿತ್ತು.
ಖಡ್ಗಮಾಲಾ ಸ್ತೋತ್ರ ಶಕ್ತಿ ದೇವಿಯ ಅತ್ಯಂತ ಪವಿತ್ರ ಮತ್ತು ಶಕ್ತಿಯುತ ಮಂತ್ರವಾಗಿದೆ. ಖಡ್ಗಮಾಲಾ ಸ್ತೋತ್ರವನ್ನು ಪಠಿಸುವುದರಿಂದ ಅತೀಂದ್ರಿಯ ಆಯುಧಗಳ ರಕ್ಷಣಾತ್ಮಕ ಮಾಲೆ ಸಿಗುತ್ತದೆ ಎಂಬ ನಂಬಿಕೆ ಇದೆ.