IND VS NZ | ಟಾಸ್ ಗೆದ್ದ ನ್ಯೂಝಿಲೆಂಡ್ ಆಯ್ಕೆ ಮಾಡಿದ್ದು ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಹಿಳಾ ತಂಡಗಳ ನಡುವಣ ಮೂರನೇ ಏಕದಿನ ಪಂದ್ಯ ಶುರುವಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಝಿಲೆಂಡ್ ತಂಡದ ನಾಯಕಿ ಸೋಫಿ ಡಿವೈನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕವಾಗಿದೆ.

ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 59 ರನ್​ಗಳ ಭರ್ಜರಿ ಜಯ ಸಾಧಿಸಿದರೆ, ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ 76 ರನ್​ಗಳ ಗೆಲುವು ದಾಖಲಿಸಿತ್ತು.

ಇದೀಗ ಅಂತಿಮ ಏಕದಿನ ಪಂದ್ಯ ನಡೆಯುತ್ತಿದ್ದು, ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಸರಣಿಯನ್ನು ಜಯಿಸಲಿದೆ. ಹೀಗಾಗಿ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!