ಮಾತಾಡಲ್ಲ ರಿಸಲ್ಟ್‌ ತೋರಿಸ್ತೀನಿ, ಮೊದಲು ನನ್ನ ಪ್ರಶ್ನೆಗೆ ಉತ್ತರ ಕೊಡಿ: ʼಕೈʼ ಮೇಲೆ ಎಚ್‌ಡಿಕೆ ಗರಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನವೆಂಬರ್ 23ರ ಉಪಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ನಾಯಕರ ಮಾತಿಗೆ ಉತ್ತರ ಕೊಡುತ್ತೇನೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ  ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇವೇಗೌಡ, ಕುಮಾರಸ್ವಾಮಿ, ಬಿಜೆಪಿ ನಾಯಕರ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಚನ್ನಪಟ್ಟಣ ಉಪಚುನಾವಣೆ ಬೇರೆ ಕ್ಷೇತ್ರಗಳಿಗಿಂತ ಗಮನ ಸೆಳೆದಿದೆ. ಕಾಂಗ್ರೆಸ್ ನಾಯಕರು ಏನೇನು ಮಾತನಾಡುತ್ತಿದ್ದಾರೆ ಎಂದು ನೋಡುತ್ತಿದ್ದೇನೆ.

ಕಾಂಗ್ರೆಸ್ ಅವರ ಪರ ಪ್ರಯೋಗ ನೋಡಿದ್ದೇನೆ. ನನ್ನ ಮೇಲೆ ಮತ್ತು ಬಿಜೆಪಿ ನಾಯಕರ ಮೇಲೆ ಆರೋಪ ಟೀಕೆ, ಟಿಪ್ಪಣಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಅವರ ಎಲ್ಲಾ ಆರೋಪಗಳನ್ನು ನೋಟ್ ಮಾಡಿ ಇಟ್ಟುಕೊಂಡಿದ್ದೇನೆ. ನವೆಂಬರ್ 13 ರಂದು ಚುನಾವಣೆ ನಡೆಯುತ್ತದೆ. ನವೆಂಬರ್ 23ರಂದು ಫಲಿತಾಂಶ ಬರಲಿದೆ. ಚುನಾವಣೆ ಫಲಿತಾಂಶ ಬಂದ ಬಳಿಕ ಎಲ್ಲರಿಗೂ ನಾನು ಉತ್ತರ ಕೊಡುತ್ತೇನೆ ಎಂದು ಹರಿಹಾಯ್ದರು.

ಜಾತಿಗಣತಿಯನ್ನು ಈ ಸರ್ಕಾರ ಯಾಕೆ ಇನ್ನೂ ಬಿಡುಗಡೆ ಮಾಡಿಲ್ಲ? ನನ್ನ ಪ್ರಶ್ನೆಗೆ ಉತ್ತರ ಕೊಡಿ  ಕಾಂತರಾಜು ವರದಿ ಅಂತ ಇದೇ ಸಿದ್ದರಾಮಯ್ಯ ಭಜನೆ ಮಾಡಿದ್ದರು. ಕುಮಾರಸ್ವಾಮಿ ವರದಿ ಸ್ವೀಕಾರ ಮಾಡಿಲ್ಲ ಅಂತ ಸಿದ್ದರಾಮಯ್ಯ ಆರೋಪ ಮಾಡಿದ್ದರು. ಇವರು ಅಧಿಕಾರಕ್ಕೆ ಬಂದು ಎಷ್ಟು ವರ್ಷ ಆಯ್ತು? ಒಂದೂವರೆ ವರ್ಷದ ಮೇಲೆ ಆಯಿತು. ಕಾಂತರಾಜು ವರದಿ ಇಟ್ಟುಕೊಂಡು ಏನು ದಿನ ಬೆಳಗುತ್ತಿದ್ದಾರಾ ಗಂಧದ ಕಡ್ಡಿ ಇಟ್ಟುಕೊಂಡು? ಜಾತಿಗಣತಿ ಬಿಡುಗಡೆ ಮಾಡಲು ಯಾಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!