ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ಮತ್ತು ಅವರ ಪುತ್ರ ಅಜಯ್ ಜೋಶಿ ಮತ್ತು ಬೆಂಗಳೂರಿನ ವಿಜಯಲಕ್ಷ್ಮಿ ಅವರ ವಿರುದ್ಧದ ಕ್ರಿಮಿನಲ್ ಪ್ರಕರಣದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಮಾಜಿ ಶಾಸಕ ದೇವಾನಂದ್ ಚವ್ಹಾಣ್ ಅವರ ಪತ್ನಿ ಸುನೀತಾ ಚವ್ಹಾಣ್ ನೀಡಿದ ದೂರಿನ ಮೇರೆಗೆ ಇತ್ತೀಚೆಗೆ ಬಂಧಿತರಾಗಿದ್ದ ಮೂವರು ಆರೋಪಿಗಳ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ತಡೆಯಾಜ್ಞೆ ನೀಡಿದ್ದಾರೆ.ಅಲ್ಲದೆ ಅವರನ್ನು ಪೊಲೀಸ್ ಕಸ್ಟಡಿಯಿಂದ ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿದೆ.
ದೂರಿನಲ್ಲಿ ಆರೋಪಿಗಳು ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಎರಡು ಕೋಟಿ ರೂಪಾಯಿ ಹಣ ಪಡೆದಿದ್ದರು. ಆದರೆ ಟಿಕೆಟ್ ಕೊಡಿಸದೆ ಆರೋಪಿಗಳು ವಂಚನೆ ಮತ್ತು ನಂಬಿಕೆಗೆ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.
ಈ ಮೊತ್ತವನ್ನು ಮರುಪಾವತಿಸಲು ಬದ್ಧರಾಗಿದ್ದೇವೆ ಎಂದು ಆರೋಪಿತ ಅರ್ಜಿದಾರರು ನ್ಯಾಯಾಲಯಕ್ಕೆ ಭರವಸೆ ನೀಡಿದ್ದರಿಂದ ಪ್ರಕರಣಕ್ಕೆ ತಡೆಯಾಜ್ಞೆ ನೀಡಲಾಗಿದೆ.