ಮಲೆನಾಡಿನ ಕೆಲವೆಡೆ ಮಳೆಯಾಗಿದ್ದರೂ ರಾಜ್ಯದಲ್ಲಿ ಅಲ್ಪ ಪ್ರಮಾಣದ ಮಳೆಯಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.