ಭಾರತದಲ್ಲಿ ಪ್ರತಿ ವರ್ಷ ವಾಯುಮಾಲೀನ್ಯದಿಂದ ಎಷ್ಟು ಮಂದಿ ʼಉಸಿರುʼ ನಿಲ್ಲಿಸಿದ್ದಾರೆ ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಭಾರತದಲ್ಲಿ ವಾಯುಮಾಲೀನ್ಯ ಮಿತಿಮೀರಿದೆ, ಇದರಿಂದಾಗಿ ಪ್ರತಿವರ್ಷ ಎಷ್ಟು ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ರಿವೀಲ್‌ ಆಗಿದೆ.

ಭಾರತದ 10 ನಗರಗಳು ವಾಯುಮಾಲಿನ್ಯದಿಂದ ಭಾರೀ ಸಮಸ್ಯೆ ಎದುರಿಸುತ್ತಿವೆ. ರಾಷ್ಟ್ರರಾಜಧಾನಿ ದಿಲ್ಲಿಯಲ್ಲೇ ವಾಯುಮಾಲಿನ್ಯಕ್ಕೆ ಅತಿ ಹೆಚ್ಚು ಸಾವುನೋವುಗಳಾಗುತ್ತಿವೆ. ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಿಂತ ಇಲ್ಲಿನ ವಾಯುವಿನ ಗುಣಮಟ್ಟ ಅತ್ಯಂತ ಕೆಳಸ್ತರದಲ್ಲಿದ್ದು ವರ್ಷಕ್ಕೆ 11 ಸಾವಿರ ಮಂದಿ ಸಾವಿಗೀಡಾಗುತ್ತಿದ್ದಾರೆ.

2ನೇ ಸ್ಥಾನದಲ್ಲಿರುವುದು ದೇಶದ ವಾಣಿಜ್ಯ ನಗರಿಯಾಗಿರುವ ಮುಂಬೈನಲ್ಲಿ, ಇಲ್ಲಿ ವರ್ಷಕ್ಕೆ ಸುಮಾರು 5,100 ಮಂದಿ ವಾಯುಮಾಲಿನ್ಯ ಸಂಬಂಧಿ ಕಾಯಿಲೆಗಳಿಂದಾಗಿ ಕೊನೆಯುಸಿರೆಳೆಯುತ್ತಿದ್ದಾರೆ. ಕೋಲ್ಕತಾದಲ್ಲಿ 4,700 ಮಂದಿ, ಚೆನ್ನೈನಲ್ಲಿ 2900 ಮಂದಿ ಸಾವಿಗೀಡಾಗುತ್ತಿದ್ದಾರೆ. 5ನೇ ಸ್ಥಾನದಲ್ಲಿ ಉದ್ಯಾನ ನಗರಿ ಬೆಂಗಳೂರು ಇದೆ. ಇಲ್ಲಿ ವರ್ಷಕ್ಕೆ 2100 ಮಂದಿ ಸಾವಿಗೀಡಾಗುತ್ತಿದ್ದಾರೆ ಎಂದು ಲ್ಯಾನ್ಸೆಟ್ ಪ್ಲಾನೆಟರಿ ಹೆಲ್ತ್ ಜರ್ನಲ್ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾಗಿದೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಭಾರತದ 10 ಪ್ರಮುಖ ಮಹಾನಗರಗಳಲ್ಲಿ ವರ್ಷಕ್ಕೆ ಸುಮಾರು 33,000 ಮಂದಿ ವಾಯು ಮಾಲಿನ್ಯದ ಕಾರಣಕ್ಕೆ ಸಾವಿಗೀಡಾಗುತ್ತಿದ್ದಾರೆಂದು ಲ್ಯಾನ್ಸೆಟ್ ಪ್ಲಾನೆಟರಿ ಹೆಲ್ತ್ ಜರ್ನಲ್ ನಡೆಸಿದ ಅಧ್ಯಯನದಿಂದ ತಿಳಿದು ಬಂದಿದೆ. ಇದಕ್ಕೆ ರಾಜ್ಯ ರಾಜಧಾನಿ ಬೆಂಗಳೂರಿನ ಕೊಡುಗೆ ಸಹ ಇರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ.

ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವ ಪ್ರತಿ ಕ್ಯುಬಿಕ್ ಮೀಟರ್‌ನಲ್ಲಿ 15 ಮೈಕ್ರೋಗ್ರಾಮ್ ಗಿಂತಲೂ ಉತ್ತಮವಾಗಿದೆ. ಆದರೆ ಭಾರತದ ನಗರಗಳಲ್ಲಿ ವಿಪರೀತ ವಾಯುಮಾಲಿನ್ಯ ಆಗುತ್ತಿದ್ದು ಇಲ್ಲಿನ ಜನರನ್ನು ವಾಯುಮಾಲಿನ್ಯದ ಅಪಾಯದಿಂದ ಪಾರು ಮಾಡಲು ಭಾರತ ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಯನ್ನು ಪಾಲಿಸಲೇ ಬೇಕಾದ ಅನಿವಾರ್ಯತೆ ಇದೆ ಎಂದು ವರದಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here