ಗುಡ್‌ನ್ಯೂಸ್ ಕೊಟ್ಟ ಗೊಂಬೆ: ನಟಿ ನೇಹಾ ಗೌಡ ಮನೆಗೆ ಲಕ್ಷ್ಮೀ ಆಗಮನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ಕಿರುತೆರೆಯ ಗೊಂಬೆ ನೇಹಾ ಗೌಡ ಮನೆಯಲ್ಲಿ ಸಂತಸ ಮನೆ ಮಾಡಿದೆ.

ಲಕ್ಷ್ಮೀ ಬಾರಮ್ಮ ಸೀರಿಯಲ್​ ಮೂಲಕ ಕನ್ನಡಿಗರ ಮನಸ್ಸಲ್ಲಿ ಹಚ್ಚ ಹಸಿರಾಗಿ ಉಳಿದುಕೊಂಡಿರೋ ನೇಹಾ ಗೌಡ ದಂಪತಿ ತಂದೆ-ತಾಯಿಯಾದ ಖುಷಿ ಸುದ್ದಿ ಹಂಚಿಕೊಂಡಿದ್ದಾರೆ.

ನಟಿ ನೇಹಾ ಗೌಡ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಇನ್ಸ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ನೇಹಾ ಗೌಡ ಅವರು ತಾಯಿಯಾದ ಸಂತಸ ವ್ಯಕ್ತಪಡಿಸಿದ್ದಾರೆ. ನೇಹಾ ಗೌಡ, ಚಂದನ್ ಗೌಡ ದಂಪತಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!