ಸಿಲಿಕಾನ್ ಸಿಟಿಯಲ್ಲಿ ಮತ್ತೆ ವರುಣನ ಎಂಟ್ರಿ: ಟ್ರಾಫಿಕ್​ ಜಾಮ್​, ವಾಹನ ಸವಾರರ ಪರದಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಲಿಕಾನ್ ಸಿಟಿಯಲ್ಲಿ ಮತ್ತೆ ವರುಣನ ಎಂಟ್ರಿ ಕೊಟ್ಟಿದ್ದು, ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸಂಪೂರ್ಣ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಮನೆಗೆ ತೆರಳಲು ಪರದಾಟ ನಡೆಸಿದರು.

ಆರ್​ಆರ್ ನಗರ, ಕೆಂಗೇರಿ, ವಿಜಯನಗರ, ಬ್ಯಾಟರಾಯನಪುರ, ಚಂದ್ರಲೇಔಟ್, ಜ್ಞಾನಭಾರತಿ, ನಾಗರಬಾವಿ, ಮಾಗಡಿ ರಸ್ತೆ, ಸುಮ್ಮನಹಳ್ಳಿ ಸೇರಿದಂತೆ ಹಲವೆಡೆ ನಗರದ ಹಲವೆಡೆ ಮಳೆಯಾಗಿದೆ. ಮಳೆಯಿಂದಾಗಿ ಸುಮ್ಮನಹಳ್ಳಿ ಜಂಕ್ಷನ್ ಬಳಿ ಟ್ರಾಫಿಕ್ ಜಾಮ್​​ ಉಂಟಾಗಿದೆ. ಟ್ರಾಫಿಕ್ ಜಾಮ್​ನಿಂದ ವಾಹನ ಸವಾರರು ಪರದಾಡಿದರು. ಟ್ರಾಫಿಕ್​ ನಿಯಂತ್ರಣಕ್ಕೆ ಸಂಚಾರಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಇನ್ನು, ಬಾಗಲೂರು ಕ್ರಾಸ್ ಅಂಡರ್‌ಪಾಸ್‌ನಲ್ಲಿ ನೀರು ನಿಂತಿರುವುದರಿಂದ ಏರ್‌ಪೋರ್ಟ್ ರಸ್ತೆ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!