ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ಪವಿತ್ರ ಗೌಡಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಕಾನೂನಿನಲ್ಲಿ ಮನೆ ಊಟಕ್ಕೆ ಅವಕಾಶ ಇಲ್ಲ. ಊಟ ನೀಡುವುದು ಸೂಕ್ತ ಅಲ್ಲ ಎಂದು ಅಭಿಪ್ರಾಯಪಟ್ಟು ಸೆಷನ್ಸ್ ಕೋರ್ಟ್ ಆದೇಶಕ್ಕೆ ತಡೆ ನೀಡಿದೆ.
ಕಳೆದ ನಾಲ್ಕು ತಿಂಗಳಿನಿಂದ ಜೈಲಿನ ಊಟ ತಿನ್ನುತ್ತಿದ್ದೇನೆ. ಜೈಲೂಟದಿಂದ ದಿನ ದಿನ ಆರೋಗ್ಯದಲ್ಲಿ ಸಮಸ್ಯೆ ಆಗುತ್ತಿದ್ದು ಮನೆಯೂಟ ನೀಡುವಂತೆ ಪವಿತ್ರಾ ಗೌಡ ನ್ಯಾಯಾಲಯಕ್ಕೆ ಅರ್ಜಿ ಹಾಕಿ ಊಟ ಪಡೆಯುವಲ್ಲಿ ಯಶಸ್ವಿಯಾಗಿದ್ದರು.
ಆದ್ರೆ ಪವಿತ್ರಾ ಗೌಡ ಮತ್ತು ಇತರೆ ಇಬ್ಬರು ಆರೋಪಿಗಳಿಗೆ ಮನೆ ಊಟ ಕೊಡುವಂತೆ 57ನೇ ಸಿಸಿಎಚ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಜೈಲಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು.
ಹೈಕೋರ್ಟ್‌ನಲ್ಲಿ ತಮ್ಮ ವಾದ ಮಂಡಿಸಿದ ಎಸ್‌ಪಿಪಿ ಜಗದೀಶ್ ಜೈಲಿನ ಊಟ ಪ್ರಮಾಣಿಕರಿಸಲಾಗಿದ್ದು ಕಳಪೆ ಆಹಾರ ಅಲ್ಲ ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಈಗಾಗಲೇ 4 ಸ್ಟಾರ್ ನೀಡಿದೆ. ಇದೂವರೆಗೂ ಯಾವೊಬ್ಬ ಆರೋಪಿಯೂ ಊಟದ ಬಗ್ಗೆ ದೂರು ನೀಡಿಲ್ಲ ಎಂದು ಕೋರ್ಟ್ ಗಮನಕ್ಕೆ ತಂದರು.
ವಾದ ಆಲಿಸಿದ ನ್ಯಾ ನಾಗಪ್ರಸನ್ನ ಅವರ ಪೀಠ ಕಾನೂನು ಎಲ್ಲರಿಗೂ ಒಂದೇ. ಯಾವುದೇ ವಿಶೇಷ ಸವಲತ್ತನ್ನು ನೀಡುವ ಹಾಗೇ ಇಲ್ಲ. ಈಗಾಗಲೇ ಸುಪ್ರೀಂ ಕೋರ್ಟ್ ವಿಶೇಷ ಸವಲತ್ತು ನೀಡಿದರೆ ಅಧಿಕಾರಿಗಳ ತಲೆದಂಡ ಮಾಡಲಾಗುವುದು ಎಂದು ಹೇಳಿದೆ ಎಂದು ಉಲ್ಲೇಖಿಸಿ ಸೆಷನ್ಸ್ ಕೋರ್ಟ್ ನೀಡಿದ ಆದೇಶಕ್ಕೆ ಬ್ರೇಕ್ ಹಾಕಿದೆ. ಅಲ್ಲದೇ ಯಾವೊಬ್ಬ ಆರೋಪಿಗೂ ಮನೆ ಊಟ ನೀಡದಂತೆ ಸೂಚಿಸಿದೆ.


