ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಶಕ್ತಿ ಯೋಜನೆ ಪರಿಷ್ಕರಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಶಕ್ತಿ ಯೋಜನೆ ಪರಿಷ್ಕರಣೆ ಕುರಿತು ಮಾತನಾಡಿ, ಶಕ್ತಿ ಯೋಜನೆ ಪರಿಷ್ಕರಣೆ ಕುರಿತು ಸರ್ಕಾರದ ಮುಂದೆ ಚರ್ಚೆಯಾಗಿಲ್ಲ. ನಿನ್ನೆಯ ಸಮಾರಂಭದಲ್ಲಿ ನಾನು ಭಾಗವಹಿಸಿರಲಿಲ್ಲ. ಸಚಿವರ ಜತೆ ಮಾತನಾಡುತ್ತೇನೆ. ಪರಿಷ್ಕರಣೆಯ ಯಾವುದೇ ಉದ್ದೇಶವಿಲ್ಲ. ಅಂತಹ ಯಾವುದೇ ಪ್ರಸ್ತಾವನೆಯನ್ನು ಸರಕಾರಕ್ಕೆ ನೀಡಿಲ್ಲ ಎಂದು ಉತ್ತರಿಸಿದ್ದಾರೆ.