ಹೊಸದಿಗಂತ ಡಿಜಿಟಲ್ ಡೆಸ್ಕ್:
ನೋಯ್ಡಾ ಟೆಕ್ಕಿ ಯುವರಾಜ್ ಮೆಹ್ತಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಮಂಗಳವಾರ ರಿಯಲ್ ಎಸ್ಟೇಟ್ ಡೆವಲಪರ್ ಒಬ್ಬರನ್ನು ಬಂಧಿಸಿದ್ದಾರೆ.
MZ ವಿಜ್‌ಟೌನ್ ಪ್ಲಾನರ್ಸ್‌ನ ಮಾಲೀಕ ಮತ್ತು ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಅಭಯ್ ಕುಮಾರ್ ಅವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ(ಗ್ರೇಟರ್ ನೋಯ್ಡಾ) ಹೇಮಂತ್ ಉಪಾಧ್ಯಾಯ ತಿಳಿಸಿದ್ದಾರೆ. ಆದರೆ ಅವರ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.
ಮೆಹ್ತಾ ಅವರ ತಂದೆ ರಾಜ್ ಕುಮಾರ್ ಮೆಹ್ತಾ ನೀಡಿದ ದೂರಿನ ಮೇರೆಗೆ ಪೊಲೀಸರು ಇಬ್ಬರು ರಿಯಲ್ ಎಸ್ಟೇಟ್ ಡೆವಲಪರ್‌ಗಳಾದ – MZ ವಿಜ್‌ಟೌನ್ ಪ್ಲಾನರ್ಸ್ ಮತ್ತು ಲೋಟಸ್ ಗ್ರೀನ್ಸ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಅವರು ದುರಂತಕ್ಕೆ ಸ್ಥಳೀಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ.


