ಜಮ್ಮು-ಕಾಶ್ಮೀರದ ಬಿಜೆಪಿ ಶಾಸಕ ದೇವೇಂದ್ರ ಸಿಂಗ್ ರಾಣಾ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ನಾಯಕ ಮತ್ತು ನಗೋಟಾ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ದೇವೇಂದರ್ ಸಿಂಗ್ ರಾಣಾ ಅವರು ಗುರುವಾರ ನಿಧನರಾಗಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. ರಾಣಾ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರ ಸಹೋದರ.

ಉದ್ಯಮಿ-ರಾಜಕಾರಣಿ ರಾಷ್ಟ್ರೀಯ ರಾಜಧಾನಿ ಪ್ರದೇಶದ ಫರಿದಾಬಾದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಣಾ ಜಮ್ಮು ಮತ್ತು ಕಾಶ್ಮೀರದ ಪ್ರಮುಖ ರಾಜಕೀಯ ವ್ಯಕ್ತಿಯಾಗಿದ್ದರು. ಅವರ ಹಠಾತ್ ನಿಧನವು ಬಿಜೆಪಿ ಮತ್ತು ಅವರ ಬೆಂಬಲಿಗರನ್ನು ಆಘಾತಕ್ಕೀಡು ಮಾಡಿದೆ. ಬಿಜೆಪಿ ಸದಸ್ಯರು ಮತ್ತು ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಈ ಪ್ರದೇಶಕ್ಕೆ ಅವರು ನೀಡಿದ ಅಮೂಲ್ಯ ಕೊಡುಗೆಗಳಿಗಾಗಿ ಅವರನ್ನು ಸ್ಮರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!