ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕನ್ನಡದಲ್ಲೇ ಸಂದೇಶ ಪ್ರಕಟಿಸಿದ್ದಾರೆ.
ಕನ್ನಡ ರಾಜ್ಯೋತ್ಸವವು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಆಚರಿಸುವ ವಿಶೇಷ ಸಂದರ್ಭವಾಗಿದ್ದು. ಎಲ್ಲಾ ಕ್ಷೇತ್ರಗಳಲ್ಲಿ ಬೆಳವಣಿಗೆ ಮತ್ತು ನಾವೀನ್ಯತೆಯನ್ನು ಹೆಚ್ಚಿಸುವ ಮಹಾನ್ ವ್ಯಕ್ತಿಗಳನ್ನು ರಾಜ್ಯವು ಪಡೆದಿದ್ದು. ಕರ್ನಾಟಕದ ಜನರು ಯಾವಾಗಲೂ ಸಂತೋಷ ಮತ್ತು ಸಮೃದ್ಧಿಯಿಂದ ಇರಲಿ” ಎಂದು ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ…
— Narendra Modi (@narendramodi) November 1, 2024