ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇವಸ್ಥಾನದಿಂದ ವಾಪಸಾಗುತ್ತಿದ್ದ ವೇಳೆ ಟಾಟಾ ಏಸ್ ಪಲ್ಟಿಯಾಗಿ 25 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಹುಣಸೇಪಾಳ್ಯ ಬಳಿ ನಡೆದಿದೆ.
ತಟ್ಟೆಕೆರೆ ಮಹದೇಶ್ವರ ದೇವಸ್ಥಾನದಿಂದ ವಾಪಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ ಎನ್ನಲಾಗಿದೆ. 25 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳು ವಿ.ಎಸ್.ದೊಡ್ಡಿ ಗ್ರಾಮದವರು ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಕೊಳ್ಳೇಗಾಲ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.