ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯನವರಿಗೆ ವಕ್ಫ್ ಬೋರ್ಡ್ ಅಂದ್ರೆ ಏನು ಅಂತ ಗೊತ್ತಿಲ್ಲ. ನೋಟೀಸ್ ವಾಪಸ್ ಪಡೆದ ತಕ್ಷಣ ಜಮೀನು ವಾಪಸ್ ಹೋಗೊದಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಆಗ ವಕ್ಫ್ ಬೋರ್ಡ್ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆಯುವಂತೆ ರೈತರಿಗೆ ಸಿಎಂ ಆದೇಶ ನೀಡಿದ್ದಾರೆ. ನೋಟಿಸ್ ವಾಪಸ್ ಪಡೆದರೆ, ನೋಟಿಸ್ ಮಾತ್ರ ಹೋಗುತ್ತದೆ. ಜಮೀನು ಹೋಗಲ್ಲ ಎಂದು ತಿಳಿಸಿದರು.
1974ರಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದಾಗ ಹೊರಡಿಸಿದ್ದ ಗೆಜೆಟ್ ಅಧಿಸೂಚನೆಯನ್ನು ಹಿಂಪಡೆಯಬೇಕು. ಆಗ ಮಾತ್ರ ರೈತರಿಗೆ ನ್ಯಾಯ ಸಿಗುತ್ತದೆ ಎಂದರು.