ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರನ್ನು ವಿಧಾನಮಂಡಲದ ಅಧಿವೇಶನಕ್ಕೆ ಆಹ್ವಾನ ನೀಡಿ ರಾಜ್ಯ ಸರ್ಕಾರ ಪತ್ರ ಬರೆದಿದೆ ಎಂದು ಹೇಳಲಾಗಿದೆ.
ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವಂತೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರಿಗೆ ಪತ್ರ ಬರೆಯಲಾಗಿದೆ ಎನ್ನಲಾಗಿದೆ.
ಗಾಂಧೀಜಿ ಕುರಿತ ಮಹತ್ವದ ಸಂದೇಶಗಳನ್ನು ಒಬಾಮ ಮೂಲಕ ರವಾನಿಸಲು ಸರ್ಕಾರ ನಿರ್ಧರಿಸಿದ್ದು, ಸಚಿವ ಎಚ್.ಕೆ.ಪಾಟೀಲ್ ಕೂಡ ಬರಾಕ್ ಒಬಾಮ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ವರದಿಯಾಗಿದೆ.